ಮಸ್ಕಿ: ‘ಅಕಾಲಿಕ ಮಳೆಯಿಂದ ಹಾಳಾದ ಭತ್ತ ಸೇರಿದಂತೆ ಇತರೆ ಬೆಳೆಗಳ ಸರ್ವೆಗೆ ಸರ್ಕಾರದ ಆದೇಶ ನೀಡಿದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರುವಿಹಾಳ ತಿಳಿಸಿದರು.

‘ತಾಲ್ಲೂಕಿನ ಬಳಗಾನೂರು, ಬೆಳ್ಳಿಗನೂರು, ಗೌಡನಭಾವಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಈಚೆಗೆ ಮಳೆಗೆ ಅಪಾರ ಪ್ರಮಾಣದ ಭತ್ತ ನೆಲಕ್ಕೆ ಉರುಳಿದೆ. ಈ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾಡಳಿತ ವರದಿ ನೀಡಿದ ಹಿನ್ನೆಲೆಯಲ್ಲಿ ಕೃಷಿ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿತ್ತು. ಸಚಿವರು ಸರ್ವೇ ಆದೇಶಿಸಿದ್ದಾರೆ. ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಕೃಷಿ ಸಹಾಯಕರ ನೇತೃತ್ವದಲ್ಲಿ ಜಂಟಿ ಸರ್ವೆ ನಡೆಸಿ ವರದಿ ಸಲ್ಲಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.