ರಾಯಚೂರು: ಗುಲಬರ್ಗಾ ವಿಶ್ವವಿದ್ಯಾಲಯದಿಂದ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.

ಶ್ರೀಗಳಿಗೆ ಡಾಕ್ಟರೇಟ್ ನೀಡುವಂತೆ ರಾಯಚೂರಿನ ಸಿಂಡಿಕೇಟ್ ಸದಸ್ಯ ಡಾ. ಶರಣಬಸಪ್ಪ ಜೋಳದಹೆಡಗಿ ಅವರು ಕಳೆದ ಫೆಬ್ರುವರಿಯಲ್ಲಿ ಕುಲಪತಿಗೆ ಮನವಿ ಸಲ್ಲಿಸಿದ್ದರು. ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀ ಹೆಸರು ಶಿಫಾರಸು ಮಾಡಿ ಸರ್ಕಾರಕ್ಕೆ ಕಳುಹಿಸಿರುವುದನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.

ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರತಿಭಾ ಡಿ.ಹಬ್ಬು ಅವರು ವಿಶ್ವವಿದ್ಯಾಲಯಕ್ಕೆ ನವೆಂಬರ್ 11 ರಂದು ಪತ್ರ ರವಾನಿಸಿದ್ದಾರೆ.

ನವೆಂಬರ್ 20 ರಂದು ನಡೆಯುವ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.