ರಾಯಚೂರು: ಕುಟುಂಬದ ಆರೋಗ್ಯದ ದೃಷ್ಟಿ ಯಿಂದ ಪ್ರತಿದಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹಾಗೂ ಪೌಷ್ಟಿಕಾಂಶ ಇರುವ ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಡಿ.ಎಂ.ಚಂದರಗಿ ಹೇಳಿದರು.

ನಗರದ ಕೃಷಿ ತಾಂತ್ರಿಕ ಮಹಾವಿದ್ಯಾಲಯ,ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್.ಕೆ.ವಿ.ವೈ) ಅಡಿಯಲ್ಲಿ ಹಾಗೂ ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ವಿಭಾಗದಿಂದ ಗುರುವಾರ ಏರ್ಪಡಿಸಿದ್ದ ‘ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ವಿಭಾಗದಲ್ಲಿ ‘ಕೋವಿಡ್ ವೈರಾಣುವಿನ ದುಷ್ಪರಿಣಾಮಗಳನ್ನು ತಡೆಯಲು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯವರ್ಧಕ ಆಹಾರ ಪದಾರ್ಥಗಳ ತಯಾರಿಕಾ ತಂತ್ರಜ್ಞಾನಗಳ ಕುರಿತು ಜಾಗೃತಿ ಹಾಗೂ ತರಬೇತಿ‘ ಉದ್ಘಾಟಿಸಿ ಮಾತನಾಡಿದರು.

ಕೋವಿಡ್-19 ಮಹಾಮಾರಿಯಿಂದ ಸಾಮಾಜಿಕವಾಗಿ ಹಾಗೂ ಮನುಷ್ಯರ ದೈನಂದಿನ ಜೀವನದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರಿದೆ. ಗೃಹಣಿಯರು ಆಹಾರ ತಯಾರಿಸುವಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯವಿದೆ ಎಂದರು.

ಸಂಜೀವಿನಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ. ವಸುಂಧರಿ ಮಾತನಾಡಿ, ಆಧುನಿಕ ಜೀವನ ಶೈಲಿಯಿಂದ ಮನುಷ್ಯರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಜನರು ಜಂಕ್ ಪುಡ್ಗಳಿಗೆ ಮಾರುಹೋಗುತ್ತಿದ್ದಾರೆ. ಅಸಮತೋಲನ ಆಹಾರದಿಂದ ದೇಹದ ಆರೋಗ್ಯ ಕೆಟ್ಟಿರುವುದರಿಂದ ಊಟದಲ್ಲಿ ಸಿರಿಧಾನ್ಯಗಳು, ಹಸಿ ತರಕಾರಿಗಳು ಹಾಗೂ ಪೌಷ್ಠಿಕಾಂಶ ಇರುವಂತ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಡೀನ್ ಡಾ.ನೇಮಿಚಂದ್ರಪ್ಪ ಮಾತನಾಡಿ, ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಸಂಸ್ಕರಣೆ ಹಾಗೂ ಆಹಾರ ತಂತ್ರಜ್ಞಾನ ವಿಭಾಗದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಪದಾರ್ಥಗಳನ್ನು ತಯಾರಿಸುವ ತಂತ್ರಜ್ಞಾನಗಳನ್ನು ಆವಿಸ್ಕರಿಸಿದ್ದಾರೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಡಾ. ಸುಧಾದೇವಿ ಜಿ. ಶುಂಠಿಯುಕ್ತ ಜೇನು ತುಪ್ಪದ ಜೆಲ್ಲಿ ತಯಾರಿಸುವ ತರಬೇತಿಯನ್ನು ನೀಡಿದರು. ಡಾ. ಪಿ. ಎಫ್. ಮಠದ, ರೋಗ ನಿರೋಧಕತೆ ಹೆಚ್ಚಿಸುವಲ್ಲಿ ಬೇಕರಿ ಪದಾರ್ಥಗಳ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಿದರು. ಡಾ. ಶರಣಗೌಡ ಹಿರೇಗೌಡರ ಮತ್ತು ಡಾ. ರೂಪಾಬಾಯಿ ಆರ್. ಎಸ್. ಅವರು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಬೇಳೆಕಾಳುಗಳ ಮಹತ್ವ ಮತ್ತು ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಿದರು.

ಸಂಶೋಧನಾ ನಿರ್ದೇಶಕ ಡಾ. ಬಿ. ಕೆ. ದೇಸಾಯಿ, ಸಂಸ್ಕರಣೆ ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಉದಯಕುಮಾರ ನಿಡೋಣಿ ಇದ್ದರು.

ಈ ತರಬೇತಿ ಕಾರ್ಯಕ್ರಮದಲ್ಲಿ 50 ರೈತ ಮಹಿಳೆಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು. ಭಾಗವಹಿಸಿದ ಶಿಬಿರಾರ್ಥಿಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಕಿಟ್ಗಳನ್ನು ವಿತರಿಸಲಾಯಿತು.

ಡಾ. ಪಿ. ಎಫ್. ಮಠದ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.