ರಾಯಚೂರು: ನಗರದ ವಿವಿಧ ಸಂಘ– ಸಂಸ್ಥೆಗಳ ಕಚೇರಿ, ಶಿಕ್ಷಣ ಕೇಂದ್ರಗಳಲ್ಲಿ ಸೋಮವಾರ ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಸಂತಕವಿ ಕನಕದಾಸ ಜಯಂತಿ ಪ್ರಯುಕ್ತ ನಗರದ ಗಂಜ್ ವೃತ್ತದ ಬಳಿಯ ಕನಕದಾಸರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಕನಕದಾಸ ವೃತ್ತದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರಕ್ಕೆ ಬಂದು ಸಮಾರೋಪಗೊಂಡಿತು.

ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ನಗರ ಶಾಸಕ ಡಾ.ಶಿವರಾಜ ಎಸ್.ಪಾಟೀಲ, ನಗರಸಭೆಯ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಉಪಾಧ್ಯಕ್ಷ ಜೆ.ಸಾಜೀದ್ ಸಮೀರ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮ, ನಗರಸಭೆಯ ಪೌರಾಯುಕ್ತ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ಮಾಜಿ ಸಂಸದ ಬಿ.ವಿ.ನಾಯಕ, ಯುವ ಮುಖಂಡ ರವಿ ಬೋಸರಾಜು ಹಾಗೂ ಹಾಲುಮತ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ: ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಎಂ. ವೀರನಗೌಡ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ‘ಕರ್ನಾಟಕದ ಎಲ್ಲ ಶರಣರು, ಸಂತರು, ದಾರ್ಶನಿಕರು ಮತ್ತು ಸಮಾಜ ಸುಧಾರಕರ ತತ್ವ– ಸಿದ್ಧಾಂತ ಒಟ್ಟಾರೆ ಒಂದೇಯಾಗಿತ್ತು. ಸರ್ವರೂ ಸುಖವಾಗಿ ಇರಬೇಕು ಎಂದು ಮಹನೀಯರು ನೀಡಿರುವ ಜೀವನ ಸಂದೇಶಗಳನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಪರಿಪಾಲಿಸಬೇಕು’ ಎಂದು ಸಲಹೆ ನೀಡಿದರು.

ಪ್ರಾಧ್ಯಾಪಕ ಬಸವಣ್ಣೆಪ್ಪ, ವ್ಯವಸ್ಥಾಪನಾ ಮಂಡಳಿಯ ಸದಸ್ಯ ಮಲ್ಲೇಶ ಕೋಲಿಮಿ, ಅಧಿಕಾರಿಗಳಾದ ಗುರುರಾಜ ಸುಂಕದ, ಮಚ್ಚೇಂದ್ರನಾಥ ಉಪಸ್ಥಿತರಿದ್ದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕ ಎಂ.ಮಹಾದೇವ ಸ್ವಾಮಿ ಸ್ವಾಗತಿಸಿದರು. ಉಪ ನಿರ್ದೇಶಕ ಡಾ.ರಾಜಣ್ಣ ನಿರೂಪಿಸಿದರು.

ಫೆಡರಲ್ ಶಾಲೆ: ಯಮರಸ್ ಕ್ಯಾಂಪ್ನಲ್ಲಿರುವ ಫೆಡರಲ್ ಶಿಕ್ಷಣ ಸಂಸ್ಥೆಯ ವತಿಯಿಂದ ಫೆಡರಲ್ ಪಬ್ಲಿಕ್ ಶಾಲೆಯಲ್ಲಿ 537ನೇ ಕನಕದಾಸರ ಜಯಂತಿ ಆಚರಿಸಲಾಯಿತು.

ಸಂಸ್ಥೆಯ ಆಡಳಿತ ಅಧಿಕಾರಿ ಸತ್ಯನಾರಾಯಣ ಕೋಸಗಿ, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಲೇಖಾ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಹೈ ಫೆರೋಜ್ ಅವರು ಕನಕದಾಸರ ಜೀವನ, ಸಾಧನೆ, ಕೀರ್ತನೆಗಳ ಕುರಿತು ಮಾತನಾಡಿದರು. ಸಂಸ್ಥೆಯ ಪದಾಧಿಕಾರಿಗಳು, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ನವಯುಗ ಶಿಕ್ಷಣ ಸಂಸ್ಥೆ: ನಗರದ ನವಯುಗ ಶಿಕ್ಷಣ ಸಂಸ್ಥೆಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಸಹಯೋಗದಲ್ಲಿ ಕನಕದಾಸರ ಜಯಂತಿ ಅಂಗವಾಗಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

ಸಂಸ್ಥೆಯ ಆಡಳಿತ ಅಧಿಕಾರಿ ನರಸಿಂಹಲು ಮಾತನಾಡಿದರು. ನವಯುಗ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜಿನ ಪ್ರಾಂಶುಪಾಲ ಡಾ.ಈರಣ್ಣ ಪೂಜಾರಿ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಮೇಶ ಉಪ್ರಾಳ, ಉಪನ್ಯಾಸಕ ಭೀಮಣ್ಣ ಭಂಡಾರಿ, ಡಾ.ರವಿಕುಮಾರ, ಜಿ.ಹನುಮಂತು, ಅನ್ನಪೂರ್ಣ, ಶರಣಪ್ಪ, ಧನಂಜಯ ಮೂರ್ತಿ, ಅನಂತರೆಡ್ಡಿ, ಚಂದ್ರಶೇಖರ, ನುಸ್ರತ್ ಬೇಗಂ ಭಾಗವಹಿಸಿದ್ದರು.

ಮ್ಯಾರಥಾನ್ಗೆ ಚಾಲನೆ: ‘ಜಾತಿ, ಮತ, ಪಂಥ ಎಂದು ಹೊಡೆದಾಡದಿರಿ. ಇರುವುದೊಂದೇ ಮಾನವಕುಲ ಎಂದು ಕೀರ್ತನೆಗಳ ಮೂಲಕ ನಾಡಿನಲ್ಲಿ ಶಾಂತಿ, ಸೌಹಾರ್ದತೆ, ಸಮಾನತೆಯ ಸಂದೇಶ ಸಾರಿದ ಶ್ರೇಷ್ಠ ಸಂತ ಕನಕದಾಸರು. ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಕಾಂಗ್ರೆಸ್ನ ಯುವ ಮುಖಂಡ ರವಿ ಬೋಸರಾಜು ತಿಳಿಸಿದರು.

ನಗರದ ರೈಲ್ವೆ ವೃತ್ತದಲ್ಲಿ ಖಾಸಗಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಕನಕದಾಸರ ಜಯಂತ್ಯುತ್ಸವ ನಿಮಿತ್ತ ಆಯೋಜಿಸಿದ್ದ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್ ಮುಖಂಡರಾದ ಮಹ್ಮದ್ ಶಾಲಂ, ಕೆ.ಶಾಂತಪ್ಪ, ಬಸವಂತಪ್ಪ, ರಾಮು ಗಿಲೆರಿ, ನಗರಸಭೆ ಉಪಾಧ್ಯಕ್ಷ ಸಾಜಿದ್ ಸಮೀರ್, ಬಿ.ರಮೇಶ, ನರಸಿಂಹಲು ಮಾಡಗಿರಿ, ನರಸರೆಡ್ಡಿ, ತಿಮ್ಮಾರಡ್ಡಿ, ಮರಿಸ್ವಾಮಿ, ಖಾಸಗಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಶೀನಾಥ, ದೈಹಿಕ ಶಿಕ್ಷಣ ಶಿಕ್ಷಕರಾದ ರವಿಕುಮಾರ, ನಾಗರಾಜ ಮಡ್ಡಿಪೇಟೆ, ಪಡೆಪ್ಪ ಮಟಮಾರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.