ಕವಿತಾಳ: ‘ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಪಟ್ಟಣದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಿರಲಿಂಗಪ್ಪ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ನಡೆದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ,‘ಅಧಿಕಾರಿಗಳು, ಸಿಬ್ಬಂದಿ ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಾತೀತವಾಗಿ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷೆ ಕಾಸಿಂಬೀ ಅವರ ಪತಿ ಚಾಂದ್ ಪಾಷಾ ಮಾತನಾಡಿದರು.

ನೂತನ ಅಧ್ಯಕ್ಷೆ ಕಾಸಿಂಬೀ ಮತ್ತು ಉಪಾಧ್ಯಕ್ಷೆ ಎಲಿಜಾ ಒವಣ್ಣ ಅವರು ಕಡತಗಳಿಗೆ ಸಹಿ ಹಾಕುವ ಮೂಲಕ ಅಧಿಕಾರ ವಹಿಸಿಕೊಂಡರು.

ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ, ಸದಸ್ಯರಾದ ಮಲ್ಲಿಕಾರ್ಜುನಗೌಡ, ರಾಜೇಶ್ವರಿ ತಿಪ್ಪಯ್ಯಸ್ವಾಮಿ, ರಮಾದೇವಿ ಸುರೇಶ, ಗೌರಮ್ಮ ಮೌನೇಶ, ಅಂಬಮ್ಮ ಮ್ಯಾಗಳಮನಿ, ಎಂ.ರಾಘವೇಂದ್ರ, ಯಲ್ಲಪ್ಪ ಮಾಡಗಿರಿ, ರುಕ್ಮುದ್ದೀನ್, ರಮೇಶ ನಗನೂರು, ಲಿಂಗರಾಜ ಕಂದಗಲ್, ಅಮರೇಶ ಕಟ್ಟಿಮನಿ, ಲಾಳೇಶ ನಾಯಕ, ಹುಲಗಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.