ರಾಯಚೂರು: ಇಲ್ಲಿನಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪುರುಷ ಮತದಾರರಕ್ಕಿಂತಲೂ ಮಹಿಳಾ ಮತದಾರರ ಸಂಖ್ಯೆ ಅಧಿಕವಾಗಿದೆ.

ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಂಟು ವಿಧಾನಸಭೆ ಕ್ಷೇತ್ರಗಳ ಒಟ್ಟು ಪುರುಷ ಮತದಾರರ ಸಂಖ್ಯೆಗೆ ಹೋಲಿಕೆ ಮಾಡಿದರೆ 13,705ರಷ್ಟು ಮಹಿಳಾ ಮತದಾರರ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯಾದಗಿರಿ, ರಾಯಚೂರು ಗ್ರಾಮೀಣ, ಮಾನ್ವಿ, ದೇವದುರ್ಗ ಹಾಗೂ ಲಿಂಗಸುಗೂರು ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ಅಧಿಕವಾಗಿದ್ದಾರೆ.

ಪುರುಷ ಹಾಗೂ ಮಹಿಳಾ ಮತದಾರರ ಸಂಖ್ಯೆಯಲ್ಲಿ 5,641ರಷ್ಟು ಅತಿಹೆಚ್ಚು ಅಂತರ ಇರುವುದು ಮಾನ್ವಿ ವಿಧಾನಸಭೆ ಕ್ಷೇತ್ರದಲ್ಲಿ. ಆ ನಂತರದಲ್ಲಿ ಕ್ರಮವಾಗಿ ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ 4,419ರಷ್ಟು, ದೇವದುರ್ಗ ಕ್ಷೇತ್ರದಲ್ಲಿ 3,524ರಷ್ಟು, ಯಾದಗಿರಿ ಕ್ಷೇತ್ರದಲ್ಲಿ 1313ರಷ್ಟು ಹಾಗೂ ಲಿಂಗಸುಗೂರು ಕ್ಷೇತ್ರದಲ್ಲಿ 1,203ರಷ್ಟು ಅಧಿಕ ಸಂಖ್ಯೆಯಲ್ಲಿ ಮಹಿಳಾ ಮತದಾರರಿದ್ದಾರೆ.

ಸುರಪುರ, ಶಹಾಪುರ ಹಾಗೂ ರಾಯಚೂರು ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಮಾತ್ರ ಪುರುಷ ಮತದಾರರ ಸಂಖ್ಯೆ ಹೆಚ್ಚಾಗಿದ್ದರೂ ಅಷ್ಟೊಂದು ಅಂತರವಿಲ್ಲ. ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಮಹಿಳಾ ಮತದಾರರು ಮೇಲುಗೈ ಸಾಧಿಸಿರುವುದು ಗಮನಾರ್ಹ.

2019 ರ ಫೆಬ್ರುವರಿ ಹಾಗೂ ಮಾರ್ಚ್ನಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲಾಡಳಿತದಿಂದ ಮತದಾರರ ಮಿಂಚಿನ ನೋಂದಣಿ ಅಭಿಯಾನ ಆಯೋಜಿಸಿದ್ದವು. 18 ವರ್ಷ ತಲುಪಿದ ಹಾಗೂ 18 ವರ್ಷ ಮೇಲ್ಪಟ್ಟಿದ್ದರೂ ಇನ್ನು ನೋಂದಣಿ ಮಾಡಿಕೊಳ್ಳದ ಯುವ ಜನರನ್ನು ನೋಂದಣಿ ಮಾಡಿಸಲಾಗಿದೆ. ಎಲ್ಲ ಕಡೆಗಳಲ್ಲೂ ಪ್ರತಿಕ್ರಿಯೆ ಉತ್ತಮವಾಗಿ ಸಿಕ್ಕಿರುವುದರಿಂದ ಒಟ್ಟು 43,694 ಮತದಾರರು ಹೊಸದಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಹೊಸ ಮತದಾರರಲ್ಲಿ ಮಹಿಳೆಯರು ಮತ್ತು ಪುರುಷರು ಎಷ್ಟಿದ್ದಾರೆ ಎಂಬುದನ್ನು ಜಿಲ್ಲಾಡಳಿತ ಇನ್ನೂ ಪ್ರಕಟಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.