ಮಸ್ಕಿ: ತಾಲ್ಲೂಕಿನ ರಂಗಾಪೂರ ಗ್ರಾಮದಲ್ಲಿ ಬಳಿ ಗುರುವಾರ ಕಾರು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಒಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕಾರು ಚಲಾಯಿಸುತ್ತಿದ್ದ ಗಿರಿಗೌಡ ಮಾಟೂರು (35) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಿಂಗಸುಗೂರು ಡಿಪೊಗೆ ಸೇರಿದ ಬಸ್ ಸಿಂಧನೂರು ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಸಿಂಧನೂರು ಕಡೆಯಿಂದ ಮಸ್ಕಿ ಕಡೆಗೆ ಕಾರು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಸ್ಥಳಕ್ಕೆ ಸಿಂಧನೂರು ಸಿಪಿಐ ವೀರಾರೆಡ್ಡಿ, ಬಳಗಾನೂರು, ಪಿಎಸ್ಐ ಯರಿಯಪ್ಪ ಅಂಗಡಿ ಭೇಟಿ ನೀಡಿ ಪರಿಶೀಲಿಸಿದ್ದು, ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.