ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಅಂತರರಾಷ್ಟ್ರೀಯ ದಾಖಲೆಗಾಗಿ ಏಕಕಾಲದಲ್ಲಿ 350 ನೃತ್ಯ ಕಲಾವಿದರು ಭಾನುವಾರ ಶ್ರೀನಾಮ ರಾಮಾಯಣ೦ ನೃತ್ಯ ಪ್ರದರ್ಶಿಸಿದರು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಹಾಗೂ ಚೆನ್ನರಾಯಪಟ್ಟಣ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
.ಮಂತ್ರಾಲಯ: ಸಪ್ತ ರಾತ್ರೋತ್ಸವ ಸಂಪನ್ನ.
ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಲ್ಲಿ ಅಕಾಡೆಮಿ, ಮಕ್ಕಳು ಹಾಗೂ ಮಠದ ಹೆಸರನ್ನು ಸೇರಿಸುವ ಹಿನ್ನೆಲೆಯಲ್ಲಿ ಜಪಾನ್, ಜರ್ಮನಿ ಇಂಡೋನೇಷಿಯಾ ಹಾಗೂ ದೇಶದ ವಿವಿಧೆಡೆಯಿಂದ ಆಗಮಿಸಿದ್ದ ನೃತ್ಯ ಕಲಾವಿದರು ಒಂದೇ ವೇದಿಕೆಯಲ್ಲಿ 15 ನಿಮಿಷಗಳ ಕಾಲ ಶ್ರೀ ನಾಮ ರಾಮಾಯಣ೦ ಗೀತೆಗೆ ಸಾಮೂಹಿಕವಾಗಿ ಹೆಜ್ಜೆ ಹಾಕಿದರು.

ಶ್ರೀ ಸುಬುದೇ೦ದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಡಾ.ಸ್ವಾತಿ ಪಿ. ಭಾರದ್ವಾಜ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
.ಮಂತ್ರಾಲಯ: ₹3.69 ಕೋಟಿ ಕಾಣಿಕೆ ಸಂಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.