ಮಂತ್ರಾಲಯ (ರಾಯಚೂರು): ಗುರು ರಾಘವೇಂದ್ರ ಸ್ವಾಮೀಜಿಯ 350ನೇ ಆರಾಧನಾ ಮಹೋತ್ಸವ ಸಪ್ತಾಹ ಆಚರಣೆ ಪ್ರಯುಕ್ತ ಆಗಸ್ಟ್ 23 ರಂದು ಸಂಜೆ 6 ಗಂಟೆಗೆ ಮಂತ್ರಾಲಯ ರಾಘವೇಂದ್ರ ಸ್ವಾಮೀಜಿ ಮುಖ್ಯ ಪ್ರಧಾನ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ಆರಾಧನೆ ಭಕ್ತಿ ಆರಾಧನೆ’ ವಿಡಿಯೊ ಧ್ವನಿ ಸುರುಳಿ ಬಿಡುಗಡೆಯಾಗಲಿದೆ.

ಹಿರಿಯ ಸಾಹಿತಿ ದಿ. ಬೆಳಗೆರೆ ಮಹಾಲಕ್ಷ್ಮಮ್ಮ ಅವರು ರಚಿಸಿರುವ ಈ ಧ್ವನಿ ಸುರುಳಿಯನ್ನು ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆ ಮಾಡುವರು. ಇದೇ ಸಂದರ್ಭದಲ್ಲಿ ಗುರು ವಂದನಾ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಗೌರಿ ನಾಗರಾಜ ನಿರ್ಮಿಸಿರುವ ಈ ಧ್ವನಿಸುರುಳಿಗೆ ಸಂಗೀತ ವಿದ್ವಾನ್ ಜಗದೀಶ ಪುತ್ತೂರು ಸಂಗೀತ ನೀಡಿ, ಗೀತೆಗಳನ್ನು ಹಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.