ಮಾನ್ವಿ (ರಾಯಚೂರು ಜಿಲ್ಲೆ): ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಹಿಂದಿರುವ ಬಿಸಿಎಂ ಇಲಾಖೆಯ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರು ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಲಾಗಿದೆ. ವಿದ್ಯಾರ್ಥಿನಿಯರು ಶೌಚಾಲಯ ಶುಚಿಗೊಳಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.

ಈ ಬೆನ್ನಲ್ಲೇ ಭಾನುವಾರ ತಾಲ್ಲೂಕು ಬಿಸಿಎಂ ಅಧಿಕಾರಿ ಸಂಗನಬಸಪ್ಪ ಬಿರಾದಾರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು. ಎಂಟು ದಿನಗಳ ಹಿಂದೆ ವಸತಿ ನಿಲಯದ ಶೌಚಾಲಯ ಶುಚಿಗೊಳಿಸಿದ್ದಾಗಿ ವಿದ್ಯಾರ್ಥಿನಿಯರು ಅಧಿಕಾರಿಗೆ ಮಾಹಿತಿ ನೀಡಿದರು.

ವಾರ್ಡನ್ ಒತ್ತಾಯದ ಮೇರೆಗೆ ಎಂಟು ದಿನಗಳ ಹಿಂದೆ ಶೌಚಾಲಯ ಸಚ್ಛಗೊಳಿಸಿದ್ದಾಗಿ ವಿದ್ಯಾರ್ಥಿನಿಯರು ತಿಳಿಸಿದರು.

‘ಶೌಚಾಲಯ ಸ್ವಚ್ಛತೆ, ಮೂಲಸೌಕರ್ಯ ಕೊರತೆ ಸೇರಿದಂತೆ ವಸತಿ ನಿಲಯದ ಸಮಸ್ಯೆಗಳ ಕುರಿತು ಮೇಲಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ವಿದ್ಯಾರ್ಥಿನಿಯರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.