ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ಕಿ: ಕುಡಿಯುವ ನೀರು, ಶೌಚಾಲಯದ ಗುಣಮಟ್ಟ ಪರಿಶೀಲನೆ

Published 25 ಜುಲೈ 2024, 12:43 IST
Last Updated 25 ಜುಲೈ 2024, 12:43 IST
ಅಕ್ಷರ ಗಾತ್ರ

ಮಸ್ಕಿ: ತಾಲ್ಲೂಕಿನ ಗುಡದೂರು ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರದ ಜಗಜಿತ್ ಸಿಂಗ್ ಸೌದಿ, ದೇವೇಶ್ ಕುಮಾರ ಭಾರಧ್ವಾಜ್ ನೇತೃತ್ವದ ತಂಡ ಭೇಟಿ ನೀಡಿ ಜೆಜೆಎಂ ಕಾಮಗಾರಿ, ಕುಡಿಯುವ ನೀರು, ಸ್ವಚ್ಛ ಭಾರತ ಮಿಷನ್ ಸೇರಿದಂತೆ ವಿವಿಧ ಯೋಜನೆಗಳನ್ನು ಗುರುವಾರ ಪರಿಶೀಲನೆ ನಡೆಸಿತು.

ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್‌ ಮಿಷನ್ ಅನುಷ್ಠಾನದ ಕುರಿತು ಗ್ರಾಮ ನೀರು ನೈರ್ಮಲ್ಯ ಸಮಿತಿಯ ರಚನೆ ಮತ್ತು ಕಾರ್ಯ ಚಟುವಟಿಕೆಗಳ ಕುರಿತು ತಾಲ್ಲೂಕು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕುಡಿಯುವ ನೀರಿನ ಗುಣಮಟ್ಟದ ಕುರಿತು ಸ್ಥಳೀಯ ನೀರು ನಿರ್ವಹಣೆ ಸಮಿತಿಯಿಂದ ಎಫ್ಟಿಕೆ ಕಿಟ್‌ ಮೂಲಕ ನೀರು ಪರೀಕ್ಷಿಸುವುದನ್ನು ಪರಿಶೀಲಿಸಿದ ತಂಡವು ಮನೆ ಮನೆಗೆ ನಳ, ವೈಯಕ್ತಿಕ ಶೌಚಾಲಯ, ಶಾಲಾ, ಅಂಗನವಾಡಿ - ಶೌಚಾಲಯ, ಸ್ವಸಹಾಯ ಸಂಘ ರಚನೆ ಕುರಿತು ಅಧಿಕಾರಿಗಳಿಂದ ವಿವರ ಪಡೆದಕೊಂಡಿತು.

ಪಂಚಾಯಿತಿ ವ್ಯಾಪ್ತಿಯ ಮೇರನಾಳ ಹಾಗೂ ಗೋನಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶೌಚಾಲಯ ಬಳಕೆ, ಕುಡಿಯುವ ನೀರಿನ ವ್ಯವಸ್ಥೆ, ಬಿಸಿಯೂಟದ ಕೊಠಡಿ ಪರಿಶೀಲಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾರೆಮ್ಮ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ, ಸಹಾಯಕ ನಿರ್ದೇಶಕ (ಪಂಚಾಯತ ರಾಜ್) ಸೋಮನಗೌಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವಿನೋದ ಕುಮಾರ ಗುಪ್ತಾ, ಎಇಇ ವಿಜಯಲಕ್ಷ್ಮೀ, ಇಂಜಿನಿಯರ್‌ಗಳಾದ ಮಂಜುನಾಥ, ಮೌನೇಶ, ಅಜರುದ್ದೀನ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಗಂಗಾಧರ ಮೂರ್ತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಯ್ಯ, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕ ಅಶೋಕ, ರಾಘವೇಂದ್ರ, ಜಿಲ್ಲಾ ಯೋಜನಾ ವ್ಯವಸ್ಥಾಪಕ ಬಸವರಾಜ್ ಗಲಗಿನ್, ಅನೀಲ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT