ರಾಯಚೂರು: ದೇವದುರ್ಗ ತಾಲ್ಲೂಕಿನ ಹೇರುಂಡಿ ಗ್ರಾಮದ ನೆರೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಿದ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೇರುಂಡಿ ಗ್ರಾಮದಲ್ಲಿ 2009ರ ಸೆಪ್ಟಂಬರ್ ಹಾಗೂ ಅಕ್ಟೋಬರ್ ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅನೇಕರು ಮನೆ ಕಳೆದುಕೊಂಡಿದ್ದಾರೆ. ಬಳಿಕ ಸರ್ವೆ ಮಾಡಿ ಅರ್ಹ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ಬದಲು ರಾಜಕೀಯ ನಾಯಕರು ತಿಳಿಸಿದ ಫಲಾನುಭವಿಗಳ ಪಟ್ಟಿ ತಯಾರಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ನೈಜ ಫಲಾನುಭವಿಗಳನ್ನು ಗುರುತಿಸದೇ ಹಣ ನೀಡಿದವರ ಹೆಸರು ಸೇರಿಸಿ ಹಕ್ಕು ಪತ್ರ ನೀಡಿದ್ದಾರೆ ಎಂದು ದೂರಿದರು.

ಮಳೆಯಿಂದ ಒಟ್ಟು 159 ಮನೆಗಳು ಹಾನಿಯಾಗಿದ್ದು ಕೇವಲ 109 ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಾಣ ಮಾಡಿದ್ದಾರೆ ಉಳಿದ 50 ಕುಟುಂಬಗಳಿಗೂ ಮನೆಗಳನ್ನು ನಿರ್ಮಿಸಿ ನ್ಯಾಯ ಒದಗಿಸಬೇಕು ಎಂದ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ಮನ್ನಾಪೂರು, ಮುಖಂಡರಾದ ಆಂಜನೇಯ, ಹೊನ್ನಪ್ಪ ಗುಂಡುಗುರ್ತಿ, ಲಕ್ಷ್ಮಣ ಮಸರಕಲ್, ಯಲ್ಲಪ್ಪ ಹೇರುಂಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.