ರಾಯಚೂರು: ‘ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಅವರ ಕುಟುಂಬ ಸದಸ್ಯರು, ಅವರ ನೂರು ಜನ ಆತ್ಮೀಯರು ಪಕ್ಷ ತೊರೆದ ಮಾತ್ರಕ್ಕೆ ಏನೂ ಆಗುವುದಿಲ್ಲ. ಕೊಪ್ಪಳದಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ’ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದರು.

‘ದೇಶದಲ್ಲಿ ಎನ್‌ಡಿಎ ಸರ್ಕಾರ ಪುನಃ ಅಧಿಕಾರಕ್ಕೆ ಬರಲಿದೆ,ಸಂಸ್ಕಾರವಿಲ್ಲದೇ ಮಾತನಾಡುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆಗಳು ಅವರಿಗೆ ಮುಳುವಾಗಲಿದೆ’ ಎಂದು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

‘ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ರೀತಿ, ಅವರ ಬಗ್ಗೆ ಮಾತನಾಡಿದ ರೀತಿ ಇಡೀ ದೇಶದ ಗೌರವ ಹೆಚ್ಚುವಂತೆ ಮಾಡಿದೆ. ಆದರೆ, ಅವರ ಬಗ್ಗೆ ಡಿ.ಕೆ.ಶಿವಕುಮಾರ, ಶಿವರಾಜ್ ತಂಗಡಗಿ ಪ್ರಧಾನಿಯವರಿಗೆ ಕಪಾಳಮೋಕ್ಷ ಮಾಡಿ ಎಂದು ಹೇಳುವ ಮೂಲಕ ನಗೆಪಾಟಲಿಗೆ ಈಡಾಗಿದ್ದಾರೆ. ಕಾಂಗ್ರೆಸ್‍ನಲ್ಲಿ ಸಂಸ್ಕೃತಿಯೇ ಇಲ್ಲ‘ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.