ರಾಯಚೂರು: ‘ರಾಷ್ಟ್ರದ ಬೆಳವಣಿಗೆಯಲ್ಲಿ ಎನ್‌ಎಸ್‌ಎಸ್ ಪಾತ್ರ ದೊಡ್ಡದಿದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್ ಸೇರುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಮಹೇಶಕುಮಾರ ತುಪ್ಪದ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ರಾಯಚೂರು ತಾಲ್ಲೂಕಿನ ಮನ್ಸಲಾಪೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಎನ್.ಎಸ್.ಎಸ್ ವಾರ್ಷಿಕ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಗುರುಸ್ವಾಮಿ ಹಿರೇಮಠ ಮಾತನಾಡಿ, ‘ಉದ್ಯೋಗ ಪಡೆಯುವುದಕ್ಕೆ ಪಠ್ಯ ನೆರವಿಗೆ ಬಂದರೆ, ಜೀವನ ನಡೆಸುವುದಕ್ಕೆ ಪಠ್ಯೇತರ ಚಟುವಟಿಕೆ ಸಹಕಾರಿ ಆಗುತ್ತದೆ’ ಎಂದರು.

ಪ್ರಾಚಾರ್ಯ ಗೋಪಾಲ ನಾಯಕ ಮಾತನಾಡಿದರು. ಉಪನ್ಯಾಸಕ ರವಿಕುಮಾರ, ಜ್ಯೋತಿ, ಶಿಬಿರದ ಅಧಿಕಾರಿ ಗೂಡುಲಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.