ಮಸ್ಕಿ: ತುಂಗಭದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಿದ್ದು ಶೀಘ್ರವೇ ತುಂಗಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆದು ಎಡದಂಡೆ ಮುಖ್ಯ ಕಾಲುವೆಗೆ ನೀರು ಬಿಡಲು ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಸಚಿವ ಶಿವರಾಜ ತಂಗಡಗಿ ಮುಂದಾಗಬೇಕು ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಪತ್ರಿಕೆ ಹೇಳಿಕೆ ನೀಡಿರುವ ಅವರು, ಈಗಾಗಲೇ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರು ಭತ್ತದ ಸಸಿಮಡಿ ಹಾಕಿ ತಿಂಗಳು ಮೇಲಾಗಿದೆ. ಎಡದಂಡೆ ಕಾಲುವೆಗೆ ನೀರು ಬಿಟ್ಟರೆ ಅಚ್ಚುಕಟ್ಟು ಪ್ರದೇಶದ ರೈತರು ಭತ್ತದ ನಾಟಿ ಮಾಡಲಿದ್ದಾರೆ, ಇದರ ಜೊತೆಗೆ ಕಾಲುವೆ ವ್ಯಾಪ್ತಿಯ ಗ್ರಾಮಗಳ ಜನರ ಕುಡಿಯುವ ನೀರಿನ ಸಮಸ್ಯೆಯು ಬಗೆ ಹರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ಕೂಡಲೇ ಸಚಿವರು ನೀರಾವರಿ ಸಲಹಾ ಸಮಿತಿ ಸಭೆ ಕರೆದು ಭತ್ತದ ಮೊದಲ ಬೆಳೆಗೆ ನೀರು ಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.