ರಾಯಚೂರು: ಶಾಸಕ ಪುಟ್ಟರಂಗ ಶೆಟ್ಟಿ ಯವರಿಗೆ ರಾಜ್ಯ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಸೋಮವಾರ ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು. ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಿದ್ಧರಾಮಯ್ಯನವರ ಸಚಿವ ಸಂಪುಟ ರಚನೆಯಲ್ಲಿ ಸಂಭಾವನೆ ಪಟ್ಟಿಯಲ್ಲಿ ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿಯವರ ಹೆಸರಿರುವುದಾಗಿ ಮಾಧ್ಯಮದಲ್ಲಿ ಪ್ರಕಟಿಸಿರುತ್ತಾರೆ. ಆದರೆ ಕೊನೆಯ ಘಳಿಗೆಯಲ್ಲಿ ಅಂತಿಮವಾಗಿ ಪ್ರಕಟಿಸಿದ ಮಂತ್ರಿಗಳ ಪಟ್ಟಿಯಲ್ಲಿ ಅವರ ಹೆಸರನ್ನುಕೈಬಿಟ್ಟಿದ್ದು ಸರಿಯಲ್ಲ. ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮಾಜದ 35 ಲಕ್ಷ ಜನರಿದ್ದು, 25 ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಮತದಾರರಾಗಿದ್ದಾರೆ.

ಸಮಾಜದಿಂದ ಕೆಲವು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದಾರೆ. ಆದರೆ ಉಪ್ಪಾರ ಸಮಾಜದ ಏಕೈಕ ಶಾಸಕ ಹಾಗೂ 4 ಭಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಸಮಾಜವನ್ನು ಕಡೆಗಣಿಸಲಾಗಿದೆ ಎಂದು ದೂರಿದರು.

ಸತತವಾಗಿ 4 ಬಾರಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿ ಶಾಸಕರಾಗಿ ಆಯ್ಕೆಯಾದ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಿ ಗೌರವಿಸಬೇಕಾಗಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಮ್ಮ ಸಮಾಜದವರ ಕಾಂಗ್ರೆಸ್‍ನ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದೇ ನಿರಾಸೆ ಮಾಡಿದ್ದಾರೆ ಎಂದು ದೂರಿದರು.

ನಿಗಮ ಮಂಡಳಿಯಲ್ಲಿ ಕನಿಷ್ಠ 3 ಜನ ನಮ್ಮ ಕಾಂಗ್ರೆಸ್‍ನ ಹಿರಿಯ ನಾಯಕರಿಗೆ ಸ್ಥಾನ ನೀಡಬೇಕು. ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಉಪ್ಪಾರ ಸಮಾಜ ಅಬಿವೃದ್ಧಿಗೆ ₹200ಕೋಟಿ ಅನುದಾನ ಒದಗಿಸಬೇಕು. ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ವಿಶೆಷ ಅನುದಾನ, ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಬೇಕು.

ಪ್ರತಿ ಜಿಲ್ಲೆಯಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡಬೇಕು. ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಇಲ್ಲದಿದ್ದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ, ಅಧ್ಯಕ್ಷರಾದ ಪಾಗುಂಟಪ್ಪ ಮಿರ್ಜಾಪುರು, ಗೌರವಾಧ್ಯಕ್ಷ ದೇವೆಂದ್ರಪ್ಪ ಉಪ್ಪಾರ ,ಯು.ವೆಂಕೋಬ, ಮದ್ದಿಕೇರಿ ಈರಣ್ಣ, ಗಧಾರ ನರಸರೆಡ್ಡಿ, ಭೀಮಯ್ಯ ಬುದ್ದಿನ್ನಿ, ಜಂಬಲದಿನ್ನಿ ನರಸಿಂಹಲು, ಆಶಾಪುರ ಹನುಮಂತಪ್ಪ, ನವಲಕಲ್ ಶ್ರೀನಿವಾಸ, ದೇವನಪಲ್ಲಿ ನಾರಾಯಣ, ಎಂ.ಚಂದ್ರಮೌಳಿ, ದೇವನಪಲ್ಲಿ ರಾಮಪ್ಪ, ನವೀನ ಕುಮಾರ, ರಂಗನಾಥ, ಅಮರೇಶ ಸಾಗರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.