ಕವಿತಾಳ: ಭೀಮ್ ಆರ್ಮಿ ಸಂಘಟನೆ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರ ಮೇಲೆ ಉತ್ತರ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯನ್ನು ಖಂಡಿಸಿ ಪಟ್ಟಣದಲ್ಲಿ ಭೀಮ್ ಆರ್ಮಿ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಗುಂಡಿನ ದಾಳಿ ಘಟನೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಹೋಬಳಿ ಘಟಕದ ಅಧ್ಯಕ್ಷ ಅಜಪ್ಪ ಬುಳ್ಳಾಪುರ ಮಾತನಾಡಿ ʼಉತ್ತರ ಪ್ರದೇಶದಲ್ಲಿ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಮತ್ತು ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಮಹಾದೇವಪ್ಪ ಬುಳ್ಳಾಪುರ, ಲಾಳ್ಳೆಪ್ಪ, ವಿನೋದ, ಗಣೇಶ, ರಮೇಶ, ಪ್ರಹ್ಲಾದ್, ಕರಿಯಪ್ಪ, ಬಿ.ಮೌನೇಶ, ಹುಸೇನಿ, ಆನಂದ್, ವಿಜಯ ಮತ್ತು ಮಂಜುನಾಥ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.