ರಾಯಚೂರು: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2018-19 ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ಭಾರತೀಯ ಕೃಷಿ ಸಂಶೋಧನಾ ಸಮಿತಿಯ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ.ಆರ್.ಸಿ.ಅಗರವಾಲ್ ಉದ್ಘಾಟಿಸಿದರು.

ಕೋವಿಡ್ ಸೋಂಕು ತಡೆ ಕಾರಣ ಚಿನ್ನದ ಪದಕ ಹಾಗೂ ಗರಿಷ್ಠ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ವಿವಿಧ ವಿಭಾಗಗಳ 49 ವಿದ್ಯಾರ್ಥಿಗಳು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು.

ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಸಮ್ಮುಖದಲ್ಲಿ ಡಾ.ಆರ್. ಸಿ. ಅಗರವಾಲ್ ಅವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಿಸಿದರು.

ಬಿಎಸ್ಸಿ ಕೃಷಿ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಸಹನಾ ರಾಮನಗೌಡ ಪೊಲೀಸ್ ಪಾಟೀಲ ಆರು ಚಿನ್ನದ ಪದಕಗಳು ಮತ್ತು ನಗದು ಬಹುಮಾನ ಪಡೆದರು.

ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದಿರುವ ರೇಖಾ ಗುಂಡಪ್ಪ ಅವರೂ ಆರು ಚಿನ್ನದ ಪದಕಗಳು ಮತ್ತು ನಗದು ಪುರಸ್ಕಾರ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.