ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಕೆಶಿಗೆ ಮುತ್ತಿಗೆ ಹಾಕಲು ಯತ್ನ

Published : 8 ಅಕ್ಟೋಬರ್ 2024, 11:14 IST
Last Updated : 8 ಅಕ್ಟೋಬರ್ 2024, 11:14 IST
ಫಾಲೋ ಮಾಡಿ
Comments

ರಾಯಚೂರು: ‘ಜಾತಿಗಣತಿ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸ್ಪಷ್ಟಪಡಿಸಿದರು.

ಸಿಂಧನೂರಲ್ಲಿ ದಸರಾ ಉತ್ಸವ ಸಮಿತಿ ಆಯೋಜಿಸಿದ್ದ ರೈತ ದಸರಾ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಜಾತಿ ಗಣತಿ ವಿಚಾರದಲ್ಲಿ ನಮ್ಮ ಪಕ್ಷ ಏನು ಹೇಳುತ್ತದೆಯೋ ಅದನ್ನೇ ನಾವೆಲ್ಲ ಮಾಡುತ್ತೇವೆ‘ ಎಂದು ಪ್ರತಿಕ್ರಿಯಿಸಿದರು.

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಐಕ್ಯ ಹೋರಾಟ ಸಮಿತಿಯ ಮುಖಂಡರು ಸಿಂಧನೂರಿನ ಹೆಲಿಪ್ಯಾಡ್ ಬಳಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ‘ಒಳಮೀಸಲಾತಿ ಜಾರಿ ಮಾಡಲೇ ಬೇಕು’ ಎಂದು ಘೋಷಣೆಗಳನ್ನೂ ಕೂಗಿದರು. ಈ ಸಂದರ್ಭದಲ್ಲಿ ಸ್ವಲ್ಪ ನೂಕುನುಗ್ಗಲು ಉಂಟಾಯಿತು.

ಸ್ಥಳದಲ್ಲೇ ಇದ್ದ ಪೊಲೀಸರು ಮುತ್ತಿಗೆ ಹಾಕಲು ಯತ್ನಿಸುತ್ತಿದ್ದವರನ್ನು ಬದಿಗೆ ಸರಿಸಿ ಉಪ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಅವಕಾಶ ಮಾಡಿಕೊಟ್ಟರು. ನಂತರ ಮುಖಂಡರು ಮನವಿಪತ್ರವನ್ನು ಸಲ್ಲಿಸಿದರು.

ಕೃಷಿ ಸಚಿವ ಚೆಲುವರಾಯ ಸ್ವಾಮಿ, ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರವಿಹಾಳ, ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT