ಮಂತ್ರಾಲಯ: ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವವು ವಿಜೃಂಭಣೆಯಿಂದ ಮುಂದುವರಿದಿದ್ದು, ಶನಿವಾರ ನೆರೆದಿದ್ದ ಅಪಾರ ಸಂಖ್ಯೆಯ ಭಕ್ತರ ಭಕ್ತಿಭಾವದ ನಡುವೆ ರಾಯರ ಮಧ್ಯಾರಾಧನೆ ನಡೆಯಿತು.

ರಾಯರ ಮೂಲ ವೃಂದಾವನದ ದರ್ಶನ ಪಡೆದ ಭಕ್ತರು ಪುನೀತರಾದರು. ಬೆಳಿಗ್ಗೆಯಿಂದ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಮಠದ ಪ್ರಾಕಾರದಲ್ಲಿ ಕುಳಿತಿದ್ದ ಅಪಾರ ಸಂಖ್ಯೆಯ ಭಕ್ತ ಸಮೂಹವು ಮೂಲ ವೃಂದಾವನದ ಮಹಾ ಅಭಿಷೇಕ ಮತ್ತು ಮೂಲ ರಾಮದೇವರ ಪೂಜೆಯನ್ನು ಎಲ್ಸಿಡಿ ಪರದೆ ಮೂಲಕ ವೀಕ್ಷಿಸಿದರು. ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಬೆಳಗಿನ ಜಾವದಿಂದ ಶಾಸ್ತ್ರೋಕ್ತವಾಗಿ ವಿಶೇಷ ಪೂಜೆಗಳನ್ನು ನೆರವೇರಿಸಿದರು.

ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ)ದ ಅಧಿಕಾರಿಗಳು ರಾಯರಿಗೆ ಸಮರ್ಪಿಸಲು ತಂದಿದ್ದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ವಿಶೇಷ ವಾದ್ಯ ಮೇಳ, ಮೆರವಣಿಗೆ ಮೂಲಕ ಮಂತ್ರಾಲಯಕ್ಕೆ ಬರಮಾಡಿಕೊಳ್ಳಲಾಯಿತು. ಶೇಷವಸ್ತ್ರವನ್ನು ಪಡೆದ ಶ್ರೀ ಸುಬುಧೇಂದ್ರ ತೀರ್ಥರು, ಅದನ್ನು ತಲೆಮೇಲೆ ಹೊತ್ತು ರಾಯರ ಸನ್ನಿಧಿಗೆ ತೆಗೆದುಕೊಂಡು ಹೋದರು. ಇದೇ ವೇಳೆ ರಾಜ್ಯ ಗೃಹ ಸಚಿವ ಅರಗಜ್ಞಾನೇಂದ್ರ ಅವರೂ ಶೇವಸ್ತ್ರವನ್ನು ತಲೆಮೇಲೆ ಹೊತ್ತು ನಡೆದರು.

ಆನಂತರ ಪಂಚಾಭಿಷೇಕ, ಆರುತಿ, ಶೇಷವಸ್ತ್ರ ಸಮರ್ಪಣೆ ಬಳಿಕ ಪ್ರಾಕಾರದಲ್ಲಿ ಸುವರ್ಣ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತ ಸಮೂಹವು ರಾಯರಿಗೆ ಜಯಘೋಷ ಕೂಗಿದರು. ಕೈಮುಗಿದು ನಮಿಸಿ, ಧನ್ಯರಾದರು. ಮಧ್ಯಾಹ್ನದ ನಂತರ ರಜತ, ಸ್ವರ್ಣ ರಥೋತ್ಸವ ಜರುಗಿತು.

ಈ ರಥೋತ್ಸವದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಭಕ್ತರು ಪ್ರಾಕಾರದಲ್ಲಿ ಬೆಳಿಗ್ಗೆಯಿಂದಲೆ ಕಾದು ಕುಳಿತಿದ್ದರು. ಚಂಡಿ ಮದ್ದಳೆ ವಾದ್ಯ ನಾದದೊಂದಿಗೆ ನಡೆದ ರಥೋತ್ಸವವು ವಿಶೇಷವಾಗಿತ್ತು.

ಮಹಿಳೆಯರು, ಮಕ್ಕಳು, ವಯೋವೃದ್ಧರು ಸೇರಿದಂತೆ ಎಲ್ಲರೂ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಮಧ್ಯಾರಾಧನೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ 12 ರಿಂದಲೇ ಅನ್ನಪ್ರಸಾದ ವಿತರಣೆ ನಡೆಯಿತು. ಜನರು ಸರದಿಯಲ್ಲಿ ಹೋಗಿ ಅನ್ನಪ್ರಸಾದ ಸೇವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.