ರಾಯಚೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪಂಗಿಪೇಟೆ ಅವರ ಮನೆಯ ಮೇಲಿನ ಎನ್ಐಎ ದಾಳಿಯನ್ನು ಖಂಡಿಸಿ ಎಸ್ ಡಿಪಿಐ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮತ್ತು ವಿವಿಧ ಸುಳ್ಳು ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಸರ್ಕಾರ ಎಸ್ ಡಿಪಿಐ ವಿರುದ್ಧ ಷಡ್ಯಂತರ ರೂಪಿಸುತ್ತಿದೆ. ಎಸ್‌ಡಿಪಿಐ ಸಂಬಂಧಿತ ಕಾರ್ಯಕರ್ತರ ಮತ್ತು ಕಚೇರಿಗಳ ಮೇಲೆ ದಾಳಿ ಮಾಡುತ್ತಿದೆ. ಇದು ಕೇವಲ ರಾಜಕೀಯ ದ್ವೇಷವಾಗಿದೆ. ಇದು ಸರ್ಕಾರಿ ಪ್ರಾಯೋಜಿತ ಸೇಡಿನ ದಾಳಿಗಳಾಗಿದೆ. ಜನಪರ ಧ್ವನಿಯಾಗಿರುವ ಎಸ್ ಡಿಪಿಐ ಪಕ್ಷವನ್ನು ದುರ್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತೌಸೀಫ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಜಿಲಾಣಿ ಪಾಶಾ, ಮಹಮ್ಮದ್ ಶಫಿ, ಬಷೀರ್ ಅಹ್ಮದ್, ಸೈಯದ್ ಇರ್ಫಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.