ಮುದಗಲ್ (ರಾಯಚೂರು): ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಮಂಗಳವಾರ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಿಂಗಸೂರು ತಾಲ್ಲೂಕಿನ ಸಜ್ಜಲಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53 ವಿದ್ಯಾರ್ಥಿಗಳು ಮತ್ತು 6 ಮಂದಿ ಶಿಕ್ಷಕರು ಸರ್ಕಾರಿ ಬಸ್ ಬುಕ್ ಮಾಡಿಕೊಂಡು ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ರಾಕ್ ಗಾರ್ಡನ್ ವೀಕ್ಷಿಸಲು ತೆರಳುತ್ತಿದ್ದರು.

ಬೇವಿನಹಳ್ಳಿ ಕ್ರಾಸ್ ಬಳಿ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
.ಗುಬ್ಬಿ: ಬಸ್-ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.