ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿರವಾರ | ಚಿರತೆ ದಾಳಿಗೆ ಮೇಕೆ ಬಲಿ: ಆತಂಕದಲ್ಲಿ ಗ್ರಾಮಸ್ಥರು

Published 18 ಜುಲೈ 2024, 14:36 IST
Last Updated 18 ಜುಲೈ 2024, 14:36 IST
ಅಕ್ಷರ ಗಾತ್ರ

ಸಿರವಾರ: ಚಿರತೆ ದಾಳಿಗೆ ಎರಡು ಮೇಕೆಗಳು ಬಲಿಯಾದ ಘಟನೆ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಕಲ್ಲೂರು ಗ್ರಾಮದ ದಿನ್ನಿ ರಸ್ತೆಯಲ್ಲಿರುವ ಬಂಡಿ ಮೊಹ್ಮದ್ ಎಂಬುವವರಿಗೆ ಸೇರಿದ ದೊಡ್ಡಿಗೆ ದಾಳಿ ಮಾಡಿದ ಚಿರತೆಗಳು ಕೊಂದು ಹಾಕಿದೆ.

’ಮೇಕೆಗಳ ಚೀರಾಟ ಕಂಡು ದೊಡ್ಡಿ ಬಳಿ ಬಂದು ನೋಡಿದಾಗ ಎರಡು ಚಿರತೆಗಳು ಓಡಿ ಹೋಗಿವೆ’ ಎಂದು ಬಂಡಿ ಮೊಹ್ಮದ್ ತಿಳಿಸಿದ್ದಾರೆ.

ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು ಕೂಡಲೇ ಅಗತ್ಯ ಕ್ರಮಕೈಗೊಂಡು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಈ ಪ್ರದೇಶದಲ್ಲಿ ಚಿರತೆ ಇರುವುದು ಖಚಿತಪಡಿಸಿದ್ದಾರೆ. ಚಿರತೆಗಳನ್ನು ಸೆರೆ ಹಿಡಿಯಲು ಬೋನ್ ಅಳವಡಿಸಲಾಗಿದೆ ಎಂದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಸುರೇಶ ಆಲಮೇಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT