ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಐತಿಹಾಸಿಕ ಗಬ್ಬೂರು ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಬುಧವಾರ ಭೇಟಿನೀಡಿ, ದರ್ಶನ ಪಡೆದರು.

’ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನವನ್ನು ಜೀರ್ಣೋದ್ಧಾರವನ್ನು ಪ್ರಾಚ್ಯವಸ್ತು ಇಲಾಖೆಯ ನಿಯಮಗಳನ್ವಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಜನಸಾಮಾನ್ಯರ ರೀತಿಯಲ್ಲಿಯೇ ದೇವಸ್ಥಾನಕ್ಕೆ ಆಗಮಿಸಿ, ಕುಳಿತು ಪ್ರಾರ್ಥನೆ ಸಲ್ಲಿಸಿದರು.

‘ಈ ದೇವಸ್ಥಾನ ಪುರಾತತ್ವ ಇಲಾಖೆಯ ಅಧೀನದಲ್ಲಿದೆ. ದೇವಸ್ಥಾನ ಜೀರ್ಣೋದ್ಧಾರದ ಸಾಧ್ಯ, ಸಾಧ್ಯತೆ ಪರಿಶೀಲಿಸಲಾಗುವುದು. ಪುರಾತತ್ವ ಇಲಾಖೆಯ ಮಾರ್ಗದರ್ಶನ ಮೇರೆಗೆ ಯಾವ ರೀತಿಯಲ್ಲಿ ಜೀರ್ಣೋದ್ಧಾರ ಮಾಡಬಹುದು ಎನ್ನುವುದರ ಬಗ್ಗೆ ಮಾಹಿತಿ ಪಡೆಯಲಾಗುವುದು. ಈ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ತಮ್ಮದೇಯಾದ ನೆರವು ನೀಡಲಾಗುವುದು‘ ಎಂದು ಹೇಳಿದರು.

ದೇವಸ್ಥಾನದ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿ ಅರ್ಧಗಂಟೆಯ ಬಳಿಕ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.