ರಾಯಚೂರು: ನಗರದ ಒಟ್ಟು 32 ಕೇಂದ್ರಗಳಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸಲಾಯಿತು.

ರಾಯಚೂರಿನ ಪರೀಕ್ಷಾ ಕೇಂದ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್. ದುರುಗೇಶ ಭೇಟಿ ನೀಡಿ ಪರಿಶೀಲಿಸಿದರು.

ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಬೆಳಿಗ್ಗೆ ಮೊದಲನೇ ಅಧಿವೇಶನದಲ್ಲಿ ಒಟ್ಟು 5,560 ಅಭ್ಯರ್ಥಿಗಳ ಪೈಕಿ 4,836 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 724 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.

ಮಧ್ಯಾಹ್ನ ಎರಡನೇಯ ಅಧಿವೇಶನದಲ್ಲಿ ಒಟ್ಟು 8,256 ಅಭ್ಯರ್ಥಿಗಳ ಪೈಕಿ 7,669 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 587 ಅಭ್ಯರ್ಥಿಗಳು ಗೈರಾಗಿದ್ದಾರೆ.

ಪರೀಕ್ಷೆ ಸಂದರ್ಭದಲ್ಲಿ ಅಹಿತಕರ, ತಾಂತ್ರಿಕ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾಗಿತ್ತು. ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೆ.ಡಿ ಬಡಿಗೇರ್, ನೋಡಲ್ ಅಧಿಕಾರಿ, ಜಾಗೃತ ದಳ ತಂಡ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೊ ಚಿತ್ರೀಕರಣ, ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.