ಮಸ್ಕಿ: ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾದ ಬೆನ್ನಲ್ಲೆ ಬಹುತೇಕ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಆಕಾಂಕ್ಷಿಗಳು ಸದಸ್ಯರೊಂದಿಗೆ ಪ್ರವಾಸಕೈಗೊಂಡಿದ್ದಾರೆ.

ಮೀಸಲಾತಿ ಪ್ರಕಟವಾದ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾಡಳಿತ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ದಿನಾಂಕ ಘೋಷಣೆವರೆಗೂ ಸದಸ್ಯರನ್ನು ಒಂದೇಡೆ ಹಿಡಿದಿಟ್ಟುಕೊಳ್ಳಲು ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸ್ಥಾನದ ಆಕಾಂಕ್ಷಿಗಳು, ಪಕ್ಷಗಳ ಮುಖಂಡರ ಸಲಹೆ ಸೂಚನೆ ಮೇರೆಗೆ ರಾಜ್ಯದ ಪ್ರಮುಖ ಸ್ಥಳಗಳ ಜೊತೆಗೆ ಮಹಾರಾಷ್ಟ್ರ ಹಾಗೂ ಕೇರಳ, ತಮಿಳುನಾಡಿನ ಪ್ರಮುಖ ಸ್ಥಳಗಳ ಧಾರ್ಮಿಕ ಕ್ಷೇತ್ರಗಳ ದರ್ಶನ ಆರಂಭಿಸಿದ್ದಾರೆ.

ಒಂದು ವಾರದಿಂದ ಪ್ರವಾಸದಲ್ಲಿರುವ ಸದಸ್ಯರು ಚುನಾವಣೆ ದಿನಾಂಕ ನಿಗದಿಯಾದ ದಿನವೇ ನೆರವಾಗಿ ಬಂದು ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ, ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲಿತ ಸದಸ್ಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ದಿನಾಂಕ ಘೋಷಣೆ 15 ರಿಂದ 1 ತಿಂಗಳಾಗಬಹುದು. ಅಲ್ಲಿವರೆಗೆ ವಾಹನಗಳ ಖರ್ಚು, ಲಾಡ್ಜ್, ಊಟ ಜೊತೆಗೆ ಸದಸ್ಯರು ಬೇಡಿಕೆ ಇಡುವ ಎಲ್ಲಾ ಖರ್ಚುಗಳನ್ನು ಆಕಾಂಕ್ಷಿಗಳು ಭರಿಸಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.