ರಾಯಚೂರು: ವಿಶ್ವಕರ್ಮ ಸಮಾಜದ ಯುವಕರು ವಿದ್ಯಾವಂತರಾಗಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ ಸಲಹೆ ನೀಡಿದರು.

ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲೆಡೆಯಲ್ಲೂ ಯಾಂತ್ರಿಕರಣ ಆಗಿರುವುದರಿಂದ ವಿಶ್ವಕರ್ಮ ಸಮುದಾಯದವರಿಗೆ ಬಹಳಷ್ಟು ಆರ್ಥಿಕ ಸಂಕಷ್ಟ ಎದುರಾಗಿದೆ. ವಿಶ್ವಕರ್ಮ ಸಮಾಜದವರು ತಮ್ಮ ಕುಲಕಸುಬಾದ ಚಿನ್ನಾಭರಣ ತಯಾರಿಕಾ ವೃತ್ತಿಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದು, ಈ ಮೂಲಕ ಭಾರತದ ಸಂಸ್ಕೃತಿಯನ್ನು ಹಾಗೂ ಕಲೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಚಿನ್ನಾಭರಣಗಳು ಯಂತ್ರಗಳಲ್ಲಿತಯಾರಾಗುವುದರಿಂದ ವಿಶ್ವಕರ್ಮ ಸಮಾಜದವರು ಆರ್ಥಿಕ ಸಂಕಷ್ಟ ಎದುರಾಗಿದೆ. ಯುವಕರು ಶಿಕ್ಷಣ ಪಡೆಯುವುದಕ್ಕೆ ಮಹತ್ವ ಕೊಡಬೇಕು. ಇದರಿಂದ ಉನ್ನತಿ ಸಾಧಿಸಬಹುದಾಗಿದೆ ಎಂದು ತಿಳಿಸಿದರು.

ವಿಶ್ವಕರ್ಮ ಸಮಾಜವು ಒಗ್ಗಟ್ಟಿನಿಂದ ಇರುವ ಸಮಾಜವಾಗಿದೆ. ಸಮಾಜದ ಒಗ್ಗಟ್ಟು ಮುಂದುವರಿಸಬೇಕು. ವಿಶ್ವಕರ್ಮ ಸಮಾಜಕ್ಕಾಗಿ ಮುಂದಿನ ದಿನಗಳಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ವಿಶ್ವಕರ್ಮ ಸಮಾಜದ ಯುವಪೀಳಿಗೆಯು ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಶಿಕ್ಷಣದಿಂದ ಸಮುದಾಯದ ಪ್ರಗತಿ ಸಾಧ್ಯವಾಗಲಿದೆ ಎಂದರು.

ನಗರಸಭೆ ಅಧ್ಯಕ್ಷೆ ಲಲಿತಾ ಆಂಜನೇಯ ಕಡಗೋಲ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಉಪನಿರ್ದೇಶಕಿ ಮಂಗಳಾ ನಾಯಕ, ಈರಣ್ಣ ಬಡಿಗೇರ, ವಿಶ್ವಕರ್ಮ ಸಮಾಜದ ಅಜೇಂದ್ರಸ್ವಾಮೀಜಿ, ಬ್ರಹ್ಮಗಣೇಶ, ಗಿರೀಶ ಆಚಾರ್ಯ, ರಾಮು ಗಾಣದಾಳ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.