ಇಂದಿನಿಂದ ಗ್ರಾಮದಲ್ಲೇ ಆರೋಗ್ಯ ಕಾರ್ಡ್ ಪಡೆಯಲು ಅವಕಾಶ
ಜ.5ರಿಂದ ಐದು ವರ್ಷ ಮೇಲ್ಪಟ್ವರು ತಮ್ಮ ಆಧಾರ್ ಕಾರ್ಡ್ ಪಡಿತರ ಚೀಟಿ ಆಧಾರ್ ನೋಂದಾಯಿತ ಮೊಬೈಲ್ ನಂಬರ್ ಇರುವ ಮೊಬೈಲ್ ತೆಗೆದೊಕೊಂಡು ಸಮೀಪದ ಗ್ರಾಮ ಒನ್ ಕೇಂದ್ರಕ್ಕೆ ಹೋಗಿ ಕಾರ್ಡ್ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ₹10 ಶುಲ್ಕದೊಂದಿಗೆ ನೀಡಲಾಗುತ್ತದೆ. ಗ್ರಾಮ ಒನ್ ಒನ್ ಮತ್ತು ಸೇವ ಸಿಂಧು ಕೇಂದ್ರಗಳಲ್ಲೂ ಕನಿಷ್ಠ ಶುಲ್ಕದೊಂದಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಈ ಯೋಜನೆಯು ಬಿ.ಪಿ.ಎಲ್ ಕಾರ್ಡ್ ಹೊಂದಿದವರಿಗೆ ₹ 5 ಲಕ್ಷ ವರೆಗೆ ವೈದ್ಯಕೀಯ ಸೌಲಭ್ಯ ಒಂದು ವರ್ಷದವರಿಗೆ ಮತ್ತು ಎ.ಪಿ.ಎಲ್ ಕಾರ್ಡ್ ಹೊಂದಿದವರಿಗೆ ₹ 1.50 ಲಕ್ಷ ವರೆಗೆ ವೈದ್ಯಕೀಯ ಸೌಲಭ್ಯ ದೊರೆಯುತ್ತದೆ. ಕ್ಲಿಷ್ಟಕರ ಚಿಕಿತ್ಸೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹು ಎಂದು ಡಿಎಚ್‌ಒ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ.