ರಾಯಚೂರು: ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಡಿಸೆಂಬರ್ 11 ರಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಕರಾಳ ದಿನ ಆಚರಿಸಲಾಗುವುದು ಎಂದು ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಿವರಾಯ ಅಕ್ಕರಕಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ವರ್ಷ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ ನಡೆಯಿತು. ಹಲ್ಲೆ ನಡೆದ ದಿನವನ್ನು ಕರಾಳ ದಿನವೆಂದು ಆಚರಿಸಲಾಗುತ್ತಿದೆ. ಯಾವುದೇ ರಾಜಕೀಯ ಪಕ್ಷ ವರದಿ ಜಾರಿಗೆ ಸ್ಪಂದಿಸುತ್ತಿಲ್ಲ. ಈ ನಿರ್ಲಕ್ಷ್ಯದ ವಿರುದ್ಧ ಬೆಳಗಾವಿಯ ಸುವರ್ಣ ಸೌಧದ ಎದುರು ಕಳೆದ ವರ್ಷ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಪೊಲೀಸರು ನಡೆಸಿದ ಲಾಠಿ ಪ್ರಹಾರದಿಂದ ಅನೇಕರು ಗಾಯಗೊಂಡಿದ್ದರು. ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಏಳು ಜನರು ಸಾವಿಗೀಡಾದರು. ಆದರೂ ಸರ್ಕಾರವು ಬೇಡಿಕೆ ಈಡೇರಿಸಲು ಸ್ಪಂದಿಸಿಲ್ಲ ಎಂದರು.

ಜನರಿಗೆ ಸುಳ್ಳು ಹೇಳಿದ್ದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಈಗ ಸಮ್ಮಿಶ್ರ ಸರ್ಕಾರದ ಮೂಲಕ ಮತ್ತೊಂದು ಅವಕಾಶ ಸಿಕ್ಕಿದೆ. ಈಗಲಾದರೂ ಸದಾಶಿವ ಆಯೋಗದ ವರದಿ ಜಾರಿಗೆ ಮುಂದಾಗಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಾದಿಗ ಸಮುದಾಯ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದು ಎಚ್ಚರಿಸಿದರು.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಮನ್ಸಲಾಪುರ, ಆಂಜಿನೇಯ್ಯ, ಭೀಮಣ್ಣ ಕಲ್ಮಲಾ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.