ರಾಮನಗರ: ಸರ್ಕಾರಿ ನೌಕರರಿಗೆ ಸಂಬಂಧಿಸಿದ ಏಳನೇ ವೇತನ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಕೆ. ಸತೀಶ್, ಸರ್ಕಾರ 2017ರಲ್ಲಿ ರಚಿಸಿದ್ದ ವೇತನ ಆಯೋಗದ ವರದಿಯನ್ನು ಸಲ್ಲಿಸಿದ 6 ತಿಂಗಳಲ್ಲೇ ಜಾರಿಗೊಳಿಸಲಾಗಿತ್ತು. ಅದು ಅನುಷ್ಠಾನಗೊಂಡು 5 ವರ್ಷವಾಗಿರುವುದರಿಂದ ನೌಕರರ ವೇತನ ಮತ್ತು ಭತ್ಯೆಗಳನ್ನು 2022 ಜುಲೈ ತಿಂಗಳಿಂದ ಪರಿಷ್ಕರಿಸಬೇಕಾಗಿತ್ತು. ಸಂಘದ ಒತ್ತಡದಿಂದಾಗಿ ಹಿಂದಿನ ಸರ್ಕಾರ ಅದೇ ವರ್ಷದ ನವೆಂಬರ್ನಲ್ಲಿ ನಿವೃತ್ತ ಮುಖ್ಯ ಕಾರ್ಯದರ್ಶಿದ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು’ ಎಂದರು.

‘ಆರು ತಿಂಗಳೊಳಗೆ ವರದಿ ಪಡೆಯದ ಸರ್ಕಾರ ಆಯೋಗವನ್ನು ಎರಡು ಸಲ ಆರು ತಿಂಗಳ ಅವಧಿಗೆ ವಿಸ್ತರಿಸಿದೆ. ಈ ವರ್ಷ ಮಾರ್ಚ್ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಇದರೊಂದಿಗೆ ಆಯೋಗ ರಚನೆಯಾಗಿ 19 ತಿಂಗಳು ಕಳೆದಿವೆ. ಇದರ ಮಧ್ಯೆ ಸಂಘ ಕೈಗೊಂಡ ಮುಷ್ಕರದಿಂದಾಗಿ ಸರ್ಕಾರ ಶೇ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಅಲ್ಲದೆ, ನೌಕರರ ಸಮ್ಮೇಳನದದಲ್ಲಿ ಮುಖ್ಯಮಂತ್ರಿ ನೀಡಿದ್ದ ವರದಿ ಅನುಷ್ಠಾನದ ಭರವಸೆ ಇನ್ನೂ ಈಡೇರಿಲ್ಲ. ಈಗಲಾದರೂ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಆಯೋಗದ ವರದಿ ಜಾರಿ ಜೊತೆಗೆ ಎನ್ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕು. ರಾಜ್ಯದಲ್ಲಿ 2.60 ಲಕ್ಷ ಖಾಲಿ ಹುದ್ದೆಗಳಿವೆ. ಹಾಲಿ ನೌಕರರಿಗೆ ಕಾರ್ಯಭಾರ ಹೆಚ್ಚಾಗಿ ಒತ್ತಡಕ್ಕೆ ಸಿಲುಕಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಾಗಾಗಿ, ಕೂಡಲೇ ಯೋಜನೆ ಜಾರಿಗೊಳಿಸಬೇಕು’ ಎಂದರು.

ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು ಸಂಘದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿದರು. ನೌಕರರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.