ಮಾಗಡಿ: ಪಟ್ಟಣದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಭಾನುವಾರ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಬಿದ್ದು ಅನಿಲ್ (16) ಎಂಬ ಕಾರ್ಮಿಕ ಮೃತಪಟ್ಟಿದ್ದಾನೆ.

ಈತ ಯಾದಗಿರಿ ಮೂಲದ ನಾಗೇಶ್ ಮತ್ತು ಲಕ್ಷ್ಮೀ ದಂಪತಿಯ ಪುತ್ರ. ಈತ ಎಸ್ಎಸ್ಎಲ್ಸಿ ಓದುತ್ತಿದ್ದ. ತಂದೆಯೊಂದಿಗೆ ವೆಂಕಟೇಶ್ ಮಾಲೀಕತ್ವದ ಕಟ್ಟಡದಲ್ಲಿ ಫ್ಲಂಬಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

‘ಮೂರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ನಾನು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದೆ. ಮೆಟ್ಟಿಲು ಇಳಿದು ಬಂದು ನೋಡಿದಾಗ ಮೂಗು, ಕಿವಿಯಲ್ಲಿ ರಕ್ತ ಹರಿದಿತ್ತು. ನನ್ನತ್ತ ನೋಡಿ ಕಣ್ಣು ಮುಚ್ಚಿಕೊಂಡ. ಎಡಗಾಲು ತುಂಡಾಗಿತ್ತು. ಫ್ಲಂಬಿಂಗ್ ಏಜೆಂಟ್ ಭೈರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ’ ಎಂದು ಮೃತನ ತಂದೆ ತಿಳಿಸಿದರು.

ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತನ ಶವ ಇಡಲಾಗಿದೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.