ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಮೂಲೆಗುಂದಿ ಗ್ರಾಮದ ಕೋಳಿ ಫಾರಂನಲ್ಲಿ ಸೋಮವಾರ ರಾತ್ರಿ ಚಿರತೆಯೊಂದು ಸೆರೆ ಸಿಕ್ಕಿದೆ.

ಪ್ರಕಾಶ್ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ನಾಲ್ಕೈದು ಕೋಳಿ ಗಳಿದ್ದವು. ಅವುಗಳನ್ನು ತಿನ್ನಲು ಹೋದ ಚಿರತೆಯನ್ನು ಕಂಡ ಅಕ್ಕಪಕ್ಕದ ಜಮೀನಿನಲ್ಲಿದ್ದ ರೈತರು ಫಾರಂನ ಬಾಗಿಲು ಹಾಕಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸಾತನೂರು ವಲಯ ಅರಣ್ಯ ಅಧಿಕಾರಿ ಆಶಾ ತಮ್ಮ ಸಿಬ್ಬಂದಿ ಜತೆಗೂಡಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ರಾತ್ರಿ ಆಗಿದ್ದರಿಂದ ತುಂಬಾ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿದರು. ಚಿರತೆ ನೋಡಲು ಸೇರಿದ್ದ ಜನರನ್ನು ಕೋಳಿ ಫಾರಂನಿಂದ ದೂರ ಕಳುಹಿಸಿದರು. ಚೀಪಿನಲ್ಲಿ ಫಾರಂ ಬಳಿ ಹೋಗಿ ಬಾಗಿಲನ್ನು ತೆಗೆದಿದ್ದಾರೆ. ಬಳಿಕ ಚಿರತೆ ಅಲ್ಲಿಂದ ಸುರಕ್ಷಿತವಾಗಿ ಹೊರಗೆ ಓಡಿ ಹೋಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.