ರಾಮನಗರ: ‘ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಮೂಲಕ, ಅವರು ದುಶ್ಚಟಗಳಿಗೆ ಬಲಿಯಾಗದಂತೆ ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಹೇಳಿದರು.

ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಆಚರಿಸುವ ಕುರಿತು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಅವರು ಅಮಾತನಾಡಿದರು.

‘ಈಗಾಗಲೇ ಶಾಲಾ– ಕಾಲೇಜು ವ್ಯಾಪ್ತಿಯ ನೂರು ಮೀಟರ್ ಅಂತರದಲ್ಲಿ ತಂಬಾಕು ಪದಾರ್ಥಗಳ ಮಾರಾಟ ನಿಷೇಧವಿದೆ. ಆದರೂ ಯಾರಾದರೂ ಮಾರಾಟ ಮಾಡುತ್ತಿರುವುದು ಕಂಡುಬಂದರೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಆ. 1ರಂದು ಶಾಲಾ-ಕಾಲೇಜುಗಳಲ್ಲಿ ಬೆಳಿಗ್ಗೆ ಜರುಗುವ ಪ್ರಾರ್ಥನೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಶಾಲಾ ಹಾಗೂ ಕಾಲೇಜುಗಳಿಗೆ ಶಿಕ್ಷಣ ಇಲಾಖೆಯವರು ನಿರ್ದೇಶನ ನೀಡಬೇಕು. ಹೆಚ್ಚು ವ್ಯಸನಿಗಳಿರುವ ಜಿಲ್ಲೆಯ ಗ್ರಾಮಗಳನ್ನು ಗುರುತಿಸಿ, ಅಲ್ಲಿಯೂ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯಿತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಬೀಡಿ-ಸಿಗರೇಟು ಸೇದುವುದು, ತಂಬಾಕು ಜಗಿಯುವುದು, ಡ್ರಗ್ಸ್ ಬಳಕೆಯಂತೆಯೇ ವಿದ್ಯಾರ್ಥಿಗಳು ಅತಿಯಾದ ಮೊಬೈಲ್ ಬಳಸುವುದು ಕೂಡ ಇತ್ತೀಚಿನ ದಿನಗಳಲ್ಲಿ ವ್ಯಸನವಾಗಿ ಮಾರ್ಪಟಿದೆ. ಮಾದಕ ವ್ಯಸನಗಳಿಂದ ಮುಕ್ತರಾಗಲು ನುರಿತ ಉಪನ್ಯಾಸರಿಂದ ಉಪನ್ಯಾಸ ಹಮ್ಮಿಕೊಳ್ಳಬೇಕು. ಶಾಲಾ–ಕಾಲೇಜುಗಳಲ್ಲಿ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಬೇಕು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪಾಲ್ಗೊಂಡವರಿಗೆ ಪ್ರಮಾಣಪತ್ರ ವಿತರಿಸಬೇಕು’ ಎಂದರು.

‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗುವ ವ್ಯಸನ ಮುಕ್ತ ದಿನಾಚರಣೆಯನ್ನು ಪರಿಣಾಮಕಾರಿಯಾಗಿರಬೇಕು. ಕಾರ್ಯಕ್ರಮಕ್ಕೆ ಅಗತ್ಯ ನೆರವನ್ನು ಸಂಬಂಧಪಟ್ಟ ಇಲಾಖೆಗಳು ನೀಡಬೇಕು. ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸು, ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ, ಸಹಾಯಕ ನಿರ್ದೇಶಕ ರಮೇಶ್ ಬಾಬು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಆರೋಗ್ಯ ಇಲಾಖೆಯ ಡಾ. ಆದರ್ಶ, ಶಿಕ್ಷಣ ಇಲಾಖೆಯ ಚಿನ್ನಸ್ವಾಮಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.

Highlights - ಜಿಲ್ಲೆಯಾದ್ಯಂತ ಜಾಗೃತಿ, ಅರಿವು ಕಾರ್ಯಕ್ರಮಗಳಿಗೆ ಸೂಚನೆ ಶಾಲಾ–ಕಾಲೇಜು ಪಕ್ಕದ ತಂಬಾಕು ಮಾರಿದರೆ ಕ್ರಮ ಕೈಗೊಳ್ಳಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.