ಮಾಗಡಿ : ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡದೇ ಇರುವುದು ನಿರಾಸೆ ಮೂಡಿಸಿದೆ. ಕೇಂದ್ರದ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಅನುದಾನ ತರುವುದರಲ್ಲಿ ವಿಫಲರಾಗಿದ್ದಾರೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಹೆಚ್ಚು ಸಂಸದರು ರಾಜ್ಯದಿಂದ ಆಯ್ಕೆಯಾಗಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ನಮ್ಮ ರಾಜ್ಯಕ್ಕೆ ಬಂಪರ್ ಕೊಡುಗೆ ತರುತ್ತಾರೆ ಎನ್ನುವ ನಿರೀಕ್ಷೆ ಇತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯದ ಎನ್ಡಿಎ ಮೈತ್ರಿಕೂಟದ ಪ್ರಾದೇಶಿಕ ಪಕ್ಷಗಳು ತಮ್ಮ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಿಸುವಲ್ಲಿ ಸಫಲರಾಗಿದ್ದಾರೆ. ಆದರೆ ಕೇಂದ್ರ ಮಂತ್ರಿಯಾಗಿರುವ ಎಚ್.ಡಿ. ಕುಮಾರಸ್ವಾಮಿ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದರು.

ಈ ಹಿಂದೆ ಕೇಂದ್ರ ಸಚಿವರಾಗಿದ್ದ ದಿ.ಅನಂತ ಕುಮಾರ್ ಅವರು ತಮ್ಮ ಆಡಳಿತ ಅವಧಿಯಲ್ಲಿ ರಾಜಕೀಯವನ್ನು ಬದಿಗಿಟ್ಟು ನಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸಮನ್ವಯ ಸಾಧಿಸಿ, ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಲು ಶ್ರಮಿಸುತ್ತಿದ್ದರು. ಎಚ್.ಡಿ. ಕುಮಾರಸ್ವಾಮಿ ಮುಂದಿನ ದಿನಗಳಲ್ಲಾದರೂ ಈ ಪ್ರಯತ್ನ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.