ಆನೇಕಲ್ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗುರುವಾರ ಐದು ದಿನಗಳ ಜನವನ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಆಗಸ್ಟ್ 26ರವರೆಗೆ ನಡೆಯಲಿರುವ ಉತ್ಸವದಲ್ಲಿ ಪರಿಸರಕ್ಕೆ ಸಂಬಂಧಿಸಿದ ಚಲನಚಿತ್ರ ಪ್ರದರ್ಶನ, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಾಗಾರ, ವಸ್ತುಪ್ರದರ್ಶನ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಪ್ರಕೃತಿ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಕರ್ತವ್ಯ ಪಾಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಅಜೀಂ ಪ್ರೇಮ್‌ಜೀ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಉದ್ಘಾಟಿಸಿದರು.

ವನ್ಯಜೀವಿಗಳ ಸಂರಕ್ಷಣೆ, ನಡವಳಿಕೆ, ಆಹಾರ ಪದ್ದತಿ, ಹವಾಮಾನ ಬದಲಾವಣೆ ಮತ್ತು ಜೀವವೈವಿಧ್ಯತೆಯೊಂದಿಗೆ ವನ್ಯಜೀವಿಗಳ ಜೀವನದ ಬಗ್ಗೆ ಉತ್ಸವದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಅನುಕೂಲವಾಗುವಂತೆ ಚಲನಚಿತ್ರ ಪ್ರದರ್ಶನ, ಪ್ರಕೃತಿ ನಡಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ರಿಜಿಸ್ಟರ್ ಶರತ್ ಸುರೆ, ಹವಾಮಾನ ಬದಲಾವಣೆ ಮತ್ತು ಸುಸ್ಥಿರತೆ ಕೇಂದ್ರದ ನಿರ್ದೇಶಕಿ ಹರಿಣಿ ನಾಗೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.