ಚನ್ನಪಟ್ಟಣ (ರಾಮನಗರ): ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ. ಟಿಕೆಟ್ಗಾಗಿ ನಾನು ಭಕಪಕ್ಷಿಯಂತೆ ಕಾಯುತ್ತಿದ್ದು, ಹೆಸರು ಘೋಷಣೆ ಮಾಡಿದ ಕೂಡಲೇ ನಾಮಪತ್ರ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಭಿಮಾನಿಗಳು ಸ್ವಾಭಿಮಾನಿ ಸೈನಿಕನ ಸ್ಪರ್ಧೆ ಖಚಿತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಳೆಯಬೇಕೆಂದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲೇಬೇಕಿದೆ. ಈ ಭಾಗದಲ್ಲಿ ಬಿಜೆಪಿಗೆ ನಾನೇ ಸೀನಿಯರ್. ಕುಮಾರಸ್ವಾಮಿ ಕೂಡಾ ಪ್ರಜ್ಞಾವಂತರಿದ್ದಾರೆ. ಕಾದುನೋಡಿ ಎಲ್ಲರನ್ನೂ ಸಮಾಧಾನ ಮಾಡಿ ನನಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ.

‘ನನಗಿರುವ ಮಾಹಿತಿ ಪ್ರಕಾರ ಬಿಜೆಪಿ-ಜೆಡಿಎಸ್ ಮುಖಂಡರು ನನ್ನ ಹೆಸರನ್ನು ಅಂತಿಮಗೊಳಿಸುತ್ತಾರೆ. ನನಗೆ ಪಕ್ಷದ ವರಿಷ್ಠರ ಮೇಲೆ ಸಂಪೂರ್ಣ ವಿಶ್ವಾಸ ಇದೆ. ಹಾಗಾಗಿ ನಾನು ಚುನಾವಣಾ ಕಣದಲ್ಲಿರುತ್ತೇನೆ’ ಎಂದು ಹೇಳಿದ್ದಾರೆ.

‘ನಾನು ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ಬಹುತೇಕ ಇನ್ನೆರಡು ದಿನಗಳಲ್ಲಿ ಹೆಸರು ಘೋಷಣೆಯಾಗಲಿದೆ. ನಾವು ಹಿಂದೆ ಬಹಳ ಬಾರಿ ಎಚ್.ಡಿ. ಕುಮಾರಸ್ವಾಮಿ ಜತೆ ಮಾತನಾಡಿದ್ದೇನೆ. ನಮ್ಮ ರಾಜ್ಯ ನಾಯಕರು, ಕೇಂದ್ರ ನಾಯಕರ ಬಳಿಯೂ ಮಾತನಾಡಿದ್ದೇನೆ. ನನಗೆ ಟಿಕೆಟ್ ಸಿಕ್ಕೇ ಸಿಗುತ್ತೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆ ಸಂಬಂಧ ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಸರ್ವೆಗಳನ್ನು ನಡೆಸಲಾಗಿದೆ. ಎಲ್ಲಾ ಸರ್ವೆಯಲ್ಲೂ ನನ್ನ ಹೆಸರೇ ಬಂದಿದೆ. ಆದ್ಯತೆ ಮೇಲೆ ಕೊಟ್ಟರು ಸಹ ನನಗೇ ಟಿಕೆಟ್ ಕೊಡಬೇಕು ಎಂದು ಹೇಳಿದ್ದಾರೆ.

‘ಒಂದು ವೇಳೆ ನನಗೆ ಟಿಕೆಟ್ ಸಿಗದಿದ್ದರೆ ನಮ್ಮ ಕಾರ್ಯಕರ್ತರು ಏನು ಹೇಳುತ್ತಾರೋ ಅದರ ಮೇಲೆ ತೀರ್ಮಾನ ಮಾಡುತ್ತೇನೆ. ಆದರೆ, ನಾನು ದುಡುಕುವ ಅವಶ್ಯಕತೆ ಇಲ್ಲ. ಬಿಜೆಪಿ-ಜೆಡಿಎಸ್ನ ಮೈತ್ರಿ ಅಭ್ಯರ್ಥಿ ನಾನೇ ಆಗುತ್ತೇನೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
.ಚನ್ನಪಟ್ಟಣ ಉಪಚುನಾವಣೆ | BJP ಸಭೆಯಲ್ಲಿ ಬಾಡೂಟದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ.ಚನ್ನಪಟ್ಟಣ | ಉಪ ಸಮರಕ್ಕೆ ಮುಹೂರ್ತ; ಗರಿಗೆದರಿದ ರಾಜಕೀಯ.ಚನ್ನಪಟ್ಟಣ ಉಪಚುನಾವಣೆ| ಪಕ್ಷದಿಂದಲೋ, ಸ್ವತಂತ್ರವೋ ಸ್ಪರ್ಧೆ ಖಚಿತ: CP ಯೋಗೇಶ್ವರ್.ಚನ್ನಪಟ್ಟಣ ಉಪಚುನಾವಣೆ | ಬಿಜೆಪಿ ಕಚೇರಿಯಲ್ಲಿ ‘ಮೈತ್ರಿ’ ಬ್ಯಾನರ್ ತೆರವು!.Karnataka By Elections |ನ.13ರಂದು ಚನ್ನಪಟ್ಟಣ, ಸಂಡೂರು,ಶಿಗ್ಗಾಂವಿ ಉಪಚುನಾವಣೆ.ಚನ್ನಪಟ್ಟಣ ಉಪ ಚುನಾವಣೆ: ಎನ್ಡಿಎ ಅಭ್ಯರ್ಥಿ ವಾರದಲ್ಲಿ ಅಂತಿಮ; ಕುಮಾರಸ್ವಾಮಿ.ಚನ್ನಪಟ್ಟಣ ಉಪ ಚುನಾವಣೆ | ನಾನೇ ಅಭ್ಯರ್ಥಿ: ಡಿ.ಕೆ.ಶಿವಕುಮಾರ್.ಚನ್ನಪಟ್ಟಣ ಉಪ ಚುನಾವಣೆ:BJPಗೆ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದವಾಗಿಲ್ಲ– ಎಚ್ಡಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.