ಚನ್ನಪಟ್ಟಣ (ರಾಮನಗರ): ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಬೆಳಿಗ್ಗೆಯಿಂದಲೇ ಗ್ರಾಮೀಣ ಭಾಗದಲ್ಲಿ ಪ್ರಚಾರ ಆರಂಭಿಸಿದರು.

ಗ್ರಾಮ ಪಂಚಾಯಿತಿ ಕೇಂದ್ರವಾದ ತಾಲ್ಲೂಕಿನ ಮಾಕಳಿ ಗ್ರಾಮದಿಂದ ಬೆಳಿಗ್ಗೆ ಪ್ರಚಾರಕ್ಕೆ ಬಂದ ಅವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಹೂವಿನ ಹಾರ ಹಾಕಿ ಘೋಷಣೆ ಕೂಗಿ ಹೆಗಲ ಮೇಲೆ ಹೊತ್ತು ಕುಣಿದರು.

ಮಾಕಳಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಸಿ. ಅಶ್ವಥ್ ಅವರ ಊರಾಗಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎ. ಮಂಜುನಾಥ್, ತಾಲ್ಲೂಕು ಅಧ್ಯಕ್ಷ ಎಚ್.ಸಿ. ಜಯಮುತ್ತು ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.