ಚನ್ನಪಟ್ಟಣ: ತಾಲ್ಲೂಕಿನ ಎನ್.ಆರ್. ಕಾಲೋನಿ ಗ್ರಾಮದಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಓಡಾಡಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಚಿರತೆ ಓಡಾಡಿರುವ ದೃಶ್ಯವು ಗ್ರಾಮದ ಮನೆಯೊಂದರಲ್ಲಿ ಅಳವಡಿಸಿದ್ದ ಸಿ.ಸಿ ಟಿ.ವಿಯಲ್ಲಿ ಸೆರೆಯಾಗಿದೆ.ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಗ್ರಾಮದ ಮಧ್ಯಭಾಗದ ರಸ್ತೆಯಲ್ಲಿ ಚಿರತೆಯು ಓಡಾಡಿದೆ. ಈ ಭಾಗದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದ್ದು, ಗ್ರಾಮದಲ್ಲಿ ಜಾನುವಾರು, ಬೀದಿನಾಯಿಗಳ ಮೇಲೆ ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕತ್ತಲಾದ ಬಳಿಕ ಮನೆಯಿಂದ ಹೊರಬರಲು ಭಯವಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಭಾಗದಲ್ಲಿ ಬೋನು ಇಟ್ಟು ಚಿರತೆಗಳನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.