ಚುನಾವಣೆಗೆ ಮೊದಲು ಡಿ.ಕೆ ಸಹೋದರರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಹಾದಿಬೀದಿಯಲ್ಲಿ ಬೈದಾಡಿಕೊಂಡಿದ್ದರು. ಈಗ ಪರಸ್ಪರ ಅಪ್ಪಿಕೊಂಡು ನಾಟಕ ಮಾಡುತ್ತಿದ್ದಾರೆ. ಇವರ ನಾಟಕ ಎಷ್ಟು ದಿನ ನಡೆಯುತ್ತದೆ ಎಂದು ನಾನೂ ನೋಡುತ್ತೇನೆಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ
ನೀರಾವರಿ ಸೇರಿದಂತೆ ನಾನು ಅಧಿಕಾರದಲ್ಲಿದ್ದಾಗ ಮಾಡಿರುವ ಕೆಲಸಗಳ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಎದುರಾಳಿಗಳು ಮಾಡುವ ಸುಳ್ಳು ಆರೋಪಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಅಭಿವೃದ್ಧಿಯೇ ನನ್ನ ಗೆಲುವಿಗೆ ಶ್ರೀರಕ್ಷೆಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿ
ಅಧಿಕಾರದಲ್ಲಿದ್ದಾಗ ಏನೂ ಕೆಲಸ ಮಾಡದ ಕುಮಾರಸ್ವಾಮಿ ಅವರು ಈಗ ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ ಎಂದು ಕಣ್ಣೀರು ಹಾಕುತ್ತಿದ್ದಾರೆ. ಅಪ್ಪ ಮತ್ತು ತಾತ ಮಾಡದ ಕೆಲಸವನ್ನು ಮೊಮ್ಮಗ ಮಾಡುತ್ತಾನೆಯೇ?ಡಿ.ಕೆ.ಸುರೇಶ್ ಮಾಜಿ ಸಂಸದ
ಹಿಂದೂ ಸಮಾಜದ ಆಸ್ತಿ ಕಾಪಾಡಲು ವಕ್ಫ್ ವಿವಾದವನ್ನು ನಾವು ಸಂಘಟಿತವಾಗಿ ಎದುರಿಸಬೇಕಿದೆ. ಹಳೆ ಮೈಸೂರು ಭಾಗದಲ್ಲಿ ಶಾಂತಿ ಕದಡಲು ಪ್ರಯತ್ನಿಸಲಾಗುತ್ತಿದೆ. ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದು ಮುಸ್ಲಿಮರಿಗೂ ದೇಶದ ಕಾನೂನು ಅನ್ವಯವಾಗಬೇಕುಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.