ಹಾರೋಹಳ್ಳಿ: ರೈತರ ಅನುಕೂಲಕ್ಕಾಗಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಅಟಲ್ ಭೂ ಜಲ ಯೋಜನೆಯಡಿ ₹ 50 ಲಕ್ಷ ವೆಚ್ಚದಲ್ಲಿ ಚೆಕ್‌ಡ್ಯಾಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಮರಳವಾಡಿ ಹೋಬಳಿ ಮರೀಗೌಡನದೊಡ್ಡಿ ಸಮೀಪದ ಹಳ್ಳವೊಂದಕ್ಕೆ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚೆಕ್‌ಡ್ಯಾಂ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಮಳೆಯ ನೀರು ಹರಿದು ವ್ಯರ್ಥವಾಗುವುದನ್ನು ತಪ್ಪಿಸಲು ಇಂತಹ ಚೆಕ್‌ಡ್ಯಾಂಗಳ ನಿರ್ಮಾಣ ಅಗತ್ಯವಾಗಿದೆ ಎಂದರು.

ವಿವಿಧ ಕಾಮಗಾರಿಗಳಿಗೆ ಚಾಲನೆ: ಹಾರೋಹಳ್ಳಿ ಹೋಬಳಿಯ ಮುತ್ತರಾಯನಪುರ ಗ್ರಾಮದಲ್ಲಿ ಜಿಲ್ಲಾ ಎಸ್.ಸಿ, ಎಸ್.ಟಿ ಅನುದಾನದಡಿ ಕಾಂಕ್ರಿಟ್ ರಸ್ತೆ ಕಾಮಗಾರಿ, ಬಡೇಸಾಬರದೊಡ್ಡಿ, ಚಿಕ್ಕಸಾದೇನಹಳ್ಳಿ ಮತ್ತು ದೊಡ್ಡಸಾದೇನಹಳ್ಳಿಯಲ್ಲಿ ಎಸ್.ಸಿ ಅನುದಾನದಡಿ ರಸ್ತೆ ಕಾಮಗಾರಿ ಹಾಗೂ ಅಣೆದೊಡ್ಡಿ ಹಾಗೂ ಸೊಂಟೇನಹಳ್ಳಿ ಸಮೀಪ ತೂಗುಕಾಲುವೆ ಅಭಿವೃದ್ಧಿ ಕಾಮಗಾರಿ ಹಾಗೂ ಹೊನ್ನಾಗಲದೊಡ್ಡಿ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದರು.

ಗ್ರಾಮಕ್ಕೆ ಸ್ಮಶಾನವಿಲ್ಲ: ಅಣೆದೊಡ್ದ ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು ಸ್ಮಶಾನದ ಜಾಗವಿಲ್ಲ ಎಂದು ಶಾಸಕರ ಬಳಿ ಅಳಲು ತೋಡಿಕೊಂಡರು. ಸ್ಮಶಾನಕ್ಕೆ ಸೂಕ್ತ ಜಾಗ ಗುರುಸುವಂತೆ ಗ್ರಾಮಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ಜೆ.ಸಿ.ಬಿ ಅಶೋಕ್, ಬಮುಲ್ ನಿರ್ದೇಶಕ ಎಚ್.ಎಸ್. ಹರೀಶ್‌ಕುಮಾರ್, ಶಿವಾನಂದ, ದಿನೇಶ್, ಸುಶೀಲ್ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.