ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ ಡಿಕೆಶಿ ರಾಜಕೀಯದ ಕೊನೆ ಅಧ್ಯಾಯ: ಸಿ.ಪಿ. ಯೊಗೇಶ್ವರ್

ವಾಮಮಾರ್ಗದಲ್ಲಿ ಉಪ ಚುನಾವಣೆ ಗೆಲ್ಲಲು ತಂತ್ರ: ಆರೋಪ
Published : 20 ಜೂನ್ 2024, 13:52 IST
Last Updated : 20 ಜೂನ್ 2024, 13:52 IST
ಫಾಲೋ ಮಾಡಿ
Comments
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲು ಅವರ ಪಕ್ಷದೊಳಗಿನ ಶಾಸಕರ ವಿಶ್ವಾಸ ಪಡೆದರೆ ಸಾಕು. ಅದಕ್ಕಾಗಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದುಕೊಂಡಿದ್ದರೆ ಈ ಚುನಾವಣೆಯು ಅವರ ರಾಜಕೀಯದ ಕೊನೆಯ ಅಧ್ಯಾಯವಾಗಲಿದೆ
– ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯ
‘ಅಭ್ಯರ್ಥಿ ಆಯ್ಕೆ ಎಚ್‌ಡಿಕೆಗೆ ಬಿಟ್ಟಿದ್ದು; ಅವಕಾಶ ಕೊಟ್ಟರೆ ಸ್ಪರ್ಧೆ’
‘ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಅವರೇ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾರಣಕ್ಕಾಗಿ ಮೈತ್ರಿ ಪಕ್ಷಗಳ ನಾಯಕರೊಂದಿಗೆ ಚರ್ಚಿಸಿ ಅವರೇ ತೀರ್ಮಾನ ಕೈಗೊಳ್ಳುತ್ತಾರೆ. ನಾಯಕರು ಅವಕಾಶ ಕೊಟ್ಟರೆ ನಾನು ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಯಾರೇ ಅಭ್ಯರ್ಥಿಯಾದರೂ ಅವರ ಪರವಾಗಿ ಕೆಲಸ ಮಾಡುವೆ. ಚಿಹ್ನೆ ನಮಗೆ ಮುಖ್ಯವಲ್ಲ. ಒಟ್ಟಿನಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕಷ್ಟೆ. ಕ್ಷೇತ್ರದ ಗೆಲುವಿಗಾಗಿ ಪಕ್ಷದ ನಾಯಕರು ಶೀಘ್ರ ಸಭೆ ನಡೆಸಿ ಚರ್ಚಿಸಲಿದ್ದಾರೆ. ಮುಂದಿನ ವಾರದಿಂದ ನಾವೂ ಚುನಾವಣೆ ತಯಾರಿ ಶುರು ಮಾಡಲಿದ್ದೇವೆ’ ಎಂದ ಯೋಗೇಶ್ವರ್ ತಾವು ಸಹ ಕ್ಷೇತ್ರದ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT