ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಕಂಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪುಟ್ಟರಾಜು ಅಧ್ಯಕ್ಷರಾಗಿ, ಅರ್ಜುನ್ ಉಪಾಧ್ಯಕ್ಷರಾಗಿ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಸೊಸೈಟಿಯ ನಿರ್ದೇಶಕರ ಆಯ್ಕೆಗಾಗಿ ಸೆ. 16ರಂದು ನಡೆದಿದ್ದ ಚುನಾವಣೆಯಲ್ಲಿ ಪುಟ್ಟರಾಜು, ಅರ್ಜುನ್, ಸಿದ್ದರಾಜು, ತಮ್ಮಯ್ಯ, ತಮ್ಮಣ್ಣ, ಸಿಂಧುಕುಮಾರ್, ಜಯಂತ್ ಕುಮಾರ್, ಕೆಂಪರಾಜು, ಸಾಕಮ್ಮ, ರಾಮಚಂದ್ರಗೌಡ, ಸವಿತಾ ಚಿನ್ನಸ್ವಾಮಿ, ಲಕ್ಷ್ಮಿಶಿವು, ಶೋಭಾ ಬಸವರಾಜು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಹಕಾರ ಇಲಾಖೆಯ ಆಶಾ ಚುನಾವಣಾ ಅಧಿಕಾರಿಯಾಗಿ ಚುನಾವಣೆ ನಡೆಸಿದರು. ಸಂಘದ ಸಿಇಒ ದೇಸಿಗೌಡ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಸಂಗದ ಮಾಜಿ ಅಧ್ಯಕ್ಷ ಕೆ. ಪುಟ್ಟಮಾದೇಗೌಡ ಮಾತನಾಡಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗ್ರಾಮಸ್ಥರು ಪಕ್ಷಾತೀತವಾಗಿ ಅವಿರೋಧವಾಗಿ ಆಯ್ಕೆ ಮಾಡಲು ಸಹಕಾರ ನೀಡಿದ್ದಾರೆ. ಅದರಂತೆ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿಕೊಳ್ಳಲಾಯಿತು ಎಂದರು.

ನೂತನ ಆಡಳಿತ ಮಂಡಳಿಯವರು ಸಂಘದ ಮತ್ತು ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತುಕೊಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಮುಖಂಡರಾದ ಮಾಯಿಗೌಡ, ಕುಮಾರ್, ಶಿವಮಾದು, ರಾಮಚಂದ್ರ, ಕೆ.ಬಿ. ಶಿವಣ್ಣ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.