ಹಾರೋಹಳ್ಳಿ: ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮುಂಭಾಗ ದಲಿತ ಸಂಘಟನೆಗಳು ಅಂಗಡಿ ಮಳಿಗೆಗಳ ಹರಾಜು ಮಾಡುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಮತಾ ಸೈನಿಕ ದಳದ ರಾಜ್ಯ ಯುವ ಘಟಕದ ಅಧ್ಯಕ್ಷ ಜಿ. ಗೋವಿಂದಯ್ಯ ಮಾತನಾಡಿ, ಅಧಿಕಾರಿಗಳು 20 ವರ್ಷದಿಂದ ಪ.ಪಂ ವ್ಯಾಪ್ತಿಯ ಅಂಗಡಿಗಳ ಹರಾಜು ಮಾಡದೆ ಅಸಡ್ಡೆ ತೋರಿದ್ದಾರೆ. ಹಿಂದೆ ನಿಗದಿ ಮಾಡಿದ ಬಾಡಿಗೆ ಪಡೆಯುತ್ತಿದ್ದು ಇದುವರೆಗೂ ಹೊಸ ಹರಾಜು ಪ್ರಕ್ರಿಯೆ ಮಾಡಿಲ್ಲ. ಆಗಸ್ಟ್ 23 ರಂದು ಬಹಿರಂಗ ಹರಾಜು ನಡೆಸಲು ತೀರ್ಮಾನಿಸಿ ಡಿ.ಡಿ ಪಡೆದು ಏಕಾಏಕಿ ಪ್ರಭಾವಿಗಳ ಒತ್ತಡಕ್ಕೆ ಮಣಿದು ಹರಾಜು ಪ್ರಕ್ರಿಯೆ ಮಾಡದೆ ಅಧಿಕಾರಿಗಳು ಕೇವಲ ಸಬೂಬು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದರು.

ಮೀಸಲಾತಿ ಪ್ರಕಾರ ಹಂಚಿಕೆ ಮಾಡಬೇಕು. ದಲಿತರಿಗೆ ಅಂಗಡಿ ಮಳಿಗೆ ಹಂಚಿಕೆಯಾಗಬಹುದು ಎಂಬ ಉದ್ದೇಶಕ್ಕೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಮುಂದೂಡಲಾಗಿದೆ ಎಂದು ಆರೋಪಿಸಿದರು.

34 ಅಂಗಡಿ ಮಳಿಗೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಗಡಿ ಮಳಿಗೆಗಳ ಹರಾಜು ಪ್ರಕಟಣೆ ಹೊರಡಿಸಲು ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗುವುದು. ರಸ್ತೆ ಅಗಲೀಕರಣಕ್ಕೆ ಒಳಪಡುವ ಮಳಿಗೆಗಳನ್ನು 30 ದಿನದೊಳಗೆ ನಿಯಮಾನುಸಾರ ತೆರವುಗೊಳಿಸಲು ಕ್ರಮವಹಿಸಲಾಗುವುದು ಎಂದು ಮುಖ್ಯಾಧಿಕಾರಿ ಹಿಂಬರಹ ನೀಡಿದರು. ನಂತರ ಹೋರಾಟಗಾರರು ಪ್ರತಿಭಟನೆ ವಾಪಸ್ ಪಡೆದರು.

ಸಮತಾ ಸೈನಿಕ ದಳದ ಕೋಟೆ ಕುಮಾರ್, ಹಾರೋಹಳ್ಳಿ ಚಂದ್ರು, ಗಿರೇನಹಳ್ಳಿ ಶಿವಕುಮಾರ್, ಕೋಟೆ ಪ್ರಕಾಶ್, ಮರಳವಾಡಿ ಮಂಜು, ಬೆಣಚುಕಲ್ ದೊಡ್ಡಿ ರುದ್ರೇಶ್, ಮೇಡಮಾರನಹಳ್ಳಿ ಸುರೇಶ್, ನವೀನ್, ರವೀಂದ್ರ, ಶ್ಯಾಮ್ ಸುಂದರ್, ಕೆಬ್ಬೆದೊಡ್ಡಿ ಗೋವಿಂದು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.