ಮಾಗಡಿ: ಪಟ್ಟಣದ ಪುರಸಭಾ ವ್ಯಾಪ್ತಿಯ ಕಲ್ಯಾಗೇಟ್ನ ಸಾರ್ವಜನಿಕ ವಿನಾಯಕ ದೇವಸ್ಥಾನದ ಪಕ್ಕದ ಡಾ.ರಾಜ್ ಕುಮಾರ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ಕೂಡಲೇ ಗುಂಡಿಗಳನ್ನು ಮುಚ್ಚಬೇಕು ಪುರಸಭಾ ಸದಸ್ಯ ಕೆ.ವಿ. ಬಾಲು ಮಂಗಳವಾರ ಒತ್ತಾಯಿಸಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಸ್ತೆ ಅವ್ಯವಸ್ಥೆ ಬಗ್ಗೆ ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕಲ್ಯಾಗೇಟ್ನಿಂದ ಮಂಜುನಾಥ ಆಸ್ಪತ್ರೆವರೆಗಿನ ಮುಖ್ಯರಸ್ತೆಯಲ್ಲಿ ಹಲವು ಗುಂಡಿಗಳಿರುವುದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆಯು ಕಿರಿದಾಗಿದ್ದು, ವಾಣಿಜ್ಯ ಅಂಗಡಿಗಳು ಹೆಚ್ಚಾಗಿರುವ ಕಾರಣ ಕಾರು ಸೇರಿದಂತೆ ದೊಡ್ಡ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವೇ ಆಗದು ಎಂದು ಹೇಳಿದರು.

ಮತ್ತೊಂದೆಡೆ ಗುಂಡಿಗಳು ಹೆಚ್ಚಾಗಿರುವ ಕಾರಣ ಸಂಚಾರ ದಟ್ಟಣೆಯೂ ಹೆಚ್ಚುತ್ತಿದೆ. ಮಳೆಗಾಲದಲ್ಲಿ ಮಳೆ ನೀರು ನಿಂತು, ರಸ್ತೆಯು ಚರಂಡಿಯಂತಾಗುತ್ತದೆ. ಜೊತೆಗೆ ರಸ್ತೆ ಯಾವುದು ಮತ್ತು ಗುಂಡಿ ಯಾವುದು ಎಂದು ಗೊತ್ತಾಗದೆ, ಬೈಕ್ ಸವಾರರು ಗುಂಡಿಯಲ್ಲಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.