ಚನ್ನಪಟ್ಟಣ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರರಾಗಬೇಕು ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಕರೆ ನೀಡಿದರು.

ತಾಲ್ಲೂಕಿನ ಕೋಡಂಬಹಳ್ಳಿಯ ಶ್ರೀಕರೀಗೌಡ ಮೆಮೋರಿಯಲ್ ವಿದ್ಯಾನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತವೆ. ಜೊತೆಗೆ ಸೃಜನಶೀಲತೆ, ಕೌಶಲ ಹಾಗೂ ಕ್ರಿಯಾಶೀಲತೆ ವ್ಯಕ್ತಪಡಿಸಲು ವೇದಿಕೆ ಒದಗಿಸುತ್ತವೆ. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವೈಜ್ಞಾನಿಕ ಮಾಹಿತಿಯನ್ನು ಆಗಾಗ ಹಂಚಿಕೊಳ್ಳುವ ಮೂಲಕ ಯುವಜನರಲ್ಲಿ ಜಾಗೃತಿ ಮೂಡಿಸುವ, ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದರು.

ವಿದ್ಯಾಸಂಸ್ಥೆಯ ಅಧ್ಯಕ್ಷೆ ಕಮಲಮ್ಮ ಮಾತನಾಡಿ, ವೈಜ್ಞಾನಿಕ ಮನೋಭಾವದಿಂದ ಅಭ್ಯಸಿಸಿದರೆ ಮುಂದಿನ ದಿನಗಳಲ್ಲಿ ಅನುಕೂಲಕ್ಕೆ ಬರುತ್ತದೆ. ಈ ಮನೋಭಾವನೆ ಕೇವಲ ದಿನಾಚರಣೆಗೆ ಮಾತ್ರ ಸೀಮಿತವಾಗದೆ ನಿತ್ಯ ಜೀವನದಲ್ಲಿ ಅನುಭವಿಸಬೇಕು. ಈ ನಿಟ್ಟಿನಲ್ಲಿ ನಮ್ಮ ವಿದ್ಯಾಸಂಸ್ಥೆಯಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸಲು ಪ್ರತಿವರ್ಷ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಕೋಡಂಬಳ್ಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಮಹದೇವಯ್ಯ, ನಿವೃತ್ತ ಮುಖ್ಯಶಿಕ್ಷಕ ರಾಜಗೋಪಾಲ್, ವಿದ್ಯಾಸಂಸ್ಥೆ ಉಪಾಧ್ಯಕ್ಷ ಮಂಜುನಾಥ, ಮುಖ್ಯಶಿಕ್ಷಕಿ ಶಿಲ್ಪ, ಶಿಕ್ಷಕರಾದ ಗಣೇಶ್, ಮಹೇಶ್, ಅಮೂಲ್ಯ, ತನ್ಸಿಯಾ, ಅನಿತಾ, ನೇತ್ರ, ಸಿಬ್ಬಂದಿ, ಪೋಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.