ಕನಕಪುರ: ಮಕ್ಕಳು ದೈಹಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯ. ಕ್ರೀಡೆ ಮನುಷ್ಯನಿಗೆ ಶಿಸ್ತು ಕಲಿಸಿಕೊಡುತ್ತದೆ ಎಂದು ಕರ್ನಾಟಕ ರಾಜ್ಯ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಂದೀಶ್ ಹೇಳಿದರು.

ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಕೊಕ್ಕೋ ಪಂದ್ಯಾವಳಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ. ಕ್ರೀಡಾಕೋಟದಲ್ಲಿ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗವೂ ಸಿಗಲಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಶಿವಕುಮಾರ್ ಮಾತನಾಡಿ, ಪ್ರಾಥಮಿಕ ಹಂತದಿಂದ ಪ್ರೌಢವಸ್ಥೆವರೆಗೂ ಶಾಲಾ ಕಾಲೇಜುಗಳಲ್ಲಿ ಕ್ರೀಡೆಗೆ ಹೆಚ್ಚಿನ ಒತ್ತು ಕೊಡಲಾಗುತ್ತದೆ. ಮುಂದಿನ ಹಂತದಲ್ಲೂ ಪ್ರೋತ್ಸಾಹ ನೀಡಬೇಕೆಂದು ಹೇಳಿದರು.

ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಎಲ್.ನಾಗರಾಜು, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕ ವಿಷಯ ಪರಿವೀಕ್ಷಕ ಡಿ.ಎಸ್.ಸತೀಶ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಪ್ಪ, ಪದಾಧಿಕಾರಿಗಳಾದ ಗೂಳಿಗೌಡ, ನಾಗರಾಜು, ಚಂದ್ರಶೇಖರ್, ಸೂರ್ಯಪ್ರಕಾಶ್ ಮೇಲ್ವಿಚಾರಣೆಯ ಜವಾಬ್ದಾರಿ ಹೊತ್ತು ಪಂದ್ಯಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಶಿಕ್ಷಣ ಇಲಾಖೆ ಸಮನ್ವಯ ಅಧಿಕಾರಿ ಶ್ರೀನಿವಾಸ್, ನೌಕರರ ಸಂಘದ ನಿರ್ದೇಶಕರಾದ ಪ್ರಸನ್ನ, ಸತೀಶ್, ಕೃಷ್ಣಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.