ಕನಕಪುರ: ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮಿ ಯೋಜನೆಯನ್ನೇ ನಕಲು ಮಾಡಿ 'ಮಾಝಿ ಲಡಕಿ ಬಹಿನ್ ಯೋಜನಾ' ಎಂದು ಹೆಸರಿಟ್ಟು ₹1,500 ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು ₹3 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ನಿಲ್ಲಿಸುತ್ತಿದ್ದಾರೆ. ಸಾಮಾನ್ಯ ಮಹಿಳೆಯರು ಅಧಿಕಾರದ ಗದ್ದುಗೆ ಇರಲು ಮುಂದಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು.

ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಬೇಕಾಗಬಹುದು. ಅದಕ್ಕಾಗಿ ಸಾಮಾನ್ಯ ಮಹಿಳೆಯರು ಈಗಿನಿಂದಲೇ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ: ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ನಾನು ಸಹಕಾರ ಸಚಿವನಾಗಿದ್ದೆ. ಆಗ ಈ ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು. ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಸ್ವಸಹಾಯ ಗುಂಪುಗಳಿದ್ದವು, ಇವುಗಳನ್ನೇ ಸ್ತ್ರೀಶಕ್ತಿ ಸಂಘಗಳೆಂದು ಪರಿವರ್ತಿಸಿ, ಸಚಿವರಾಗಿದ್ದ ಮೋಟಮ್ಮ ಅವರಿಗೆ ನೇತೃತ್ವ ನೀಡಲಾಯಿತು ಎಂದರು.

ಸ್ತ್ರೀ ಶಕ್ತಿ ಸಂಘಗಳನ್ಮು ಮಾಡಿದ ಪರಿಣಾಮವಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಇರುತ್ತಿಲ್ಲ ಇಂದು ಅನೇಕ ನಾಯಕರು ನನಗೆ ಬೈದರು. ಮನೆಯಲ್ಲಿ ಹೆಣ್ಣಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತೆ. ಹೆಣ್ಣು ಕುಟುಂಬದ ಕಣ್ಣು. ಕುಟುಂಬದಲ್ಲಿ ಹೆಣ್ಣಿನ ಮನಸ್ಥಿತಿ, ಪರಿಸ್ಥಿತಿ ಆರೋಗ್ಯವಾಗಿ ಇದ್ದರೆ, ನಾವೆಲ್ಲರೂ ಆರೋಗ್ಯವಾಗಿ ಇದ್ದಂತೆ. ಪುರುಷರೂ ಇದಕ್ಕೆ ಕೊಡುಗೆ ಕೊಡಬೇಕು ಎಂದರು.

ಯಾವುದೇ ಕಾರಣಕ್ಕೂ ತಮ್ಮ ಪಾಲಿನ ಭೂಮಿ ಮಾರಾಟ ಮಾಡದಂತೆ ಮನೆಯ ಪುರುಷರಿಗೆ ಮಹಿಳೆಯರು ಬುದ್ಧಿ ಮಾತು ಹೇಳಬೇಕು. ಏಕೆಂದರೆ ಭೂಮಿಯ ಬೆಲೆ ಹೆಚ್ಚಾಗಿದೆ. ನಾನು ಮೊದಲ ಬಾರಿಗೆ ಇಲ್ಲಿ ಚುನಾವಣೆಗೆ ನಿಂತಾಗ, ಒಂದು ಎಕರೆಗೆ ಎರಡರಿಂದ ಮೂರು ಲಕ್ಷ ಮಾತ್ರ ಇತ್ತು. ಈಗ ₹50 ಲಕ್ಷ ಬೆಲೆ ಬಾಳುತ್ತದೆ ಎಂದು ಗಮನ ಸೆಳೆದರು.

ಇದನ್ನು ರಾಮನಗರ ಜಿಲ್ಲೆ ಎಂದು ಕರೆಯಬಹುದು ಆದರೆ ಮೂಲತಃ ನಾವೆಲ್ಲರೂ ಬೆಂಗಳೂರು ಜಿಲ್ಲೆಗೆ ಸೇರಿದವರು. ಕನಕಪುರ ಎಷ್ಟರಮಟ್ಟಿಗೆ ಅಭಿವೃದ್ಧಿ ಆಗುತ್ತದೆ ಎಂಬುದನ್ನು ನಾನು ಬಹಿರಂಗವಾಗಿ ಹೇಳುವುದಿಲ್ಲ. ಭೂಮಿ ಕಳೆದುಕೊಂಡರೆ ನಿಮ್ಮ ಜೇಬಿಗೆ ದುಡ್ಡನ್ನು ನಾನು ಹಾಕಲು ಆಗುವುದಿಲ್ಲ. ಜಮೀನು ಮಾರಿದರೆ ಒಳ್ಳೆಯ ಬೆಲೆ ಬರುತ್ತದೆ ಎಂದು ಆಮಿಷಕ್ಕೆ ಒಳಗಾಗಬೇಡಿ. ಯಾವುದೇ ಕಾರಣಕ್ಕೂ ಒಂದು ಕುಂಟೆ ಜಮೀನನ್ನು ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಕನಕಪುರಕ್ಕೆ ಹೊಸ ರೂಪ: ನಾವು ಇನ್ನೂ ಅಭಿವೃದ್ಧಿಯ ಮೈಲಿಗಲ್ಲನ್ನು ಸಾಧಿಸಬೇಕಾಗಿದೆ. ಕನಕಪುರಕ್ಕೆ ಹೊಸ ರೂಪವನ್ನು ನೀಡಬೇಕಾಗಿದೆ. 2025 ಕ್ಕೆ ಕನಕಪುರದ ಅಭಿವೃದ್ಧಿಗೆ ಹೊಸ ಕಾರ್ಯಕ್ರಮಗಳನ್ನು ನೀಡಲಾಗುವುದು. ಸರ್ಕಾರದಲ್ಲಿ ಹೆಚ್ಚಿನ ಜವಾಬ್ದಾರಿ ಇರುವ ಕಾರಣ ನಿಮ್ಮನ್ನು ಭೇಟಿಯಾಗಲು ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮೆಲ್ಲರ ಅಹವಾಲುಗಳನ್ನು ಕೇಳಲಾಗುವುದು ಎಂದರು.

ನನಗೆ ಯುವಕರು ಹಾಗೂ ಮಹಿಳೆಯರ ಮೇಲೆ ನಂಬಿಕೆ ಹೆಚ್ಚು. ಪಕ್ಷ ಅಧಿಕಾರಕ್ಕೆ ಬಂದರೆ ಇವರಿಗೆ ಸಹಾಯ ಮಾಡಬೇಕು ಎಂಬುದು ನನ್ನ ಅಭಿಲಾಷೆಯಾಗಿತ್ತು. ನಾನು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದಾಗ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಭರವಸೆ ನೀಡಲಾಯಿತು. ಅದೇ ರೀತಿ ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.
.ಚನ್ನಪಟ್ಟಣ ಅಭಿವೃದ್ಧಿ ಭರವಸೆ ಉಳಿಸಿಕೊಳ್ಳುತ್ತೇವೆ: ಡಿ.ಕೆ. ಶಿವಕುಮಾರ್.ಚನ್ನಪಟ್ಟಣ | ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲೇ ಹುಡುಕುತ್ತೇನೆ: ನಿಖಿಲ್ ಶಪಥ.ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತನನ್ನು ಭೇಟಿಯಾದ ನಿಖಿಲ್: ಧೃತಿಗೆಡದಂತೆ ಮನವಿ.ಹಿಂದಿನಿಂದಲೂ ಜೊತೆಗಿದ್ದ ಅಲ್ಪಸಂಖ್ಯಾತರು ನಮ್ಮ ಕೈ ಹಿಡಿಯಲಿಲ್ಲ: ನಿಖಿಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.