ರಾಮನಗರ: ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ 2024-2029ರ ಅವಧಿಯ ಜಿಲ್ಲಾ ಶಾಖೆಯ ಅಧ್ಯಕ್ಷ ಸ್ಥಾನದ ಚುನಾವಣೆಯು ಗರಿಗೆದರಿದೆ. ಹಾಲಿ ಅಧ್ಯಕ್ಷ ಕೆ. ಸತೀಶ್ ತಮ್ಮ ಬೆಂಬಲಿಗರೊಂದಿಗೆ ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ನಗರದ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಗುರುವಾರ ಸಹಾಯಕ ಚುನಾವಣಾಧಿಕಾರಿ ಎಂ. ರಾಜು ಅವರಿಗೆ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಮೂರಕ್ಕೂ ನಾಮಪತ್ರ ಸಲ್ಲಿರುವ ನಮ್ಮ ತಂಡದದವರು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಂಘದ 70 ನಿರ್ದೇಶಕ ಸ್ಥಾನಗಳಿಗೆ ಆಯ್ಕೆಯಾಗಿರುವರಲ್ಲಿ ಸುಮಾರು 60 ಮಂದಿ ನಮ್ಮ ತಂಡದವರೇ ಆಗಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಸಂಘದ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಮುಂದಿನ 5 ವರ್ಷದ ಯೋಜನೆಗಳನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಶ್ರಮಿಸಬೇಕಿದೆ. ನಮ್ಮ ತಂಡದಲ್ಲಿ ಒಗ್ಗಟ್ಟಿದೆ. ನಿರ್ದೇಶಕರು ಮಾತ್ರವಲ್ಲದೆ ಎಲ್ಲಾ ಸರ್ಕಾರಿ ನೌಕರರ ವಿಶ್ವಾಸದೊಂದಿಗೆ ಸಂಘವನ್ನು ಮತ್ತಷ್ಟು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯಲಾಗುವುದು’ ಎಂದು ಹೇಳಿದರು.

ನೌಕರರಾದ ಕಾಂತರಾಜು, ಎಂ. ರಾಜೇಗೌಡ, ಬೈರಪ್ಪ ಸಿ., ಶಿವಸ್ವಾಮಿ, ಸುರೇಂದ್ರ, ಸತೀಶ್ ಪಾದರಹಳ್ಳಿ, ಪ್ರದೀಪ್ ಎಂ, ಯತೀಶ್, ಜಗದೀಶ್, ಮಹದೇವಯ್ಯ, ರಾಮಕೃಷ್ಣಯ್ಯ, ನಾಗೇಶ್, ಲಲಿತಾ, ರವಿ, ಗಣೇಶ್, ರಾಮಸ್ವಾಮಿ, ಲಿಂಗರಾಜು, ಶಿವಕುಮಾರ್, ರಾಕೇಶ್ ಕಾಂಬಳೆ, ಬಸವರಾಜು, ಚನ್ನಕೇಶವ, ಮಧುಮಾಲ, ರಮೇಶ್ಬಾಬು, ದಾಸಪ್ಪ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.