ಮಾಗಡಿ (ರಾಮನಗರ): ‘ಪಕ್ಷ ತೀರ್ಮಾನಿಸಿದರೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವರು’ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಭಾನುವಾರ ಹೇಳಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರಿಷ್ಠರು ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸುವರು. ಡಿ.ಕೆ.ಶಿವಕುಮಾರ್ ಇದೇ ಜಿಲ್ಲೆಯವರು ಆಗಿರುವುದರಿಂದ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಡುತ್ತಿದ್ದಾರಷ್ಟೇ’ ಎಂದರು.

‘ಡಿ.ಕೆ.ಶಿವಕುಮಾರ್ ನನಗಾಗಿ ಕನಕಪುರ ಕ್ಷೇತ್ರ ಬಿಡುವರು ಎಂಬುದು ಮಾಧ್ಯಮದ ಸೃಷ್ಟಿ. ಯಾವುದೇ ಚುನಾವಣೆಗೆ ನಾನು ಸ್ಪರ್ಧಿಸುತ್ತಿಲ್ಲ. ಚನ್ನಪಟ್ಟಣ ಉಪ ಚುನಾವಣೆಗೆ ಸ್ಪರ್ಧಿಸುವ ವಿಚಾರ ನನ್ನ ಮುಂದೆ ಇಲ್ಲ. ಜನ ವಿಶ್ರಾಂತಿ ನೀಡಿದ್ದಾರೆ’ ಎಂದು ಹೇಳಿದರು.

‘ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮೂಲತಃ ಚಿತ್ರ ನಟರು. ಅವರ ಹೇಳಿಕೆಗೆ ಅಷ್ಟು ಪ್ರಾಮುಖ್ಯತೆ ನೀಡುವುದಿಲ್ಲ. ಚಲನಚಿತ್ರ ನಟರು, ನಿರ್ಮಾಪಕರು, ಕತೆಗಾರರು ಅವರೇ ಆಗಿರುವುದರಿಂದ ಕಥೆ ಯಾವಾಗ ಬೇಕಾದರೂ ಬದಲಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.