ಹಾರೋಹಳ್ಳಿ: ಕೈಗಾರಿಕಾ ಪ್ರದೇಶದಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ತ್ಯಾಜ್ಯವನ್ನು ಗುಜರಿ ಅಂಗಡಿಗಳಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದು ನಾಗರಿಕರಿಗೆ ಸೋಂಕಿನ ಭೀತಿ ಎದುರಾಗಿದೆ.

ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಹಲವು ಗುಜರಿ ಅಂಗಡಿಗಳಲ್ಲಿ ರಾಸಾಯನಿಕಗಳಿಂದ ಕೂಡಿದ ವೈದ್ಯಕೀಯ ಘನತ್ಯಾಜ್ಯ ಸಂಗ್ರಹ ಮಾಡಲಾಗಿದೆ.

ಮಾತ್ರೆ, ಖಾಲಿ ಔಷಧ ಬಾಕ್ಸ್ಗಳು ಸೇರಿದಂತೆ ಇನ್ನಿತರ ವೈದ್ಯಕೀಯ ತ್ಯಾಜ್ಯವನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿಕೊಳ್ಳಲಾಗಿದೆ. ಯಾವುದೇ ನಿಯಮ ಪಾಲಿಸುತ್ತಿಲ್ಲ. ಕಾರ್ಖಾನೆಗಳು ಬಳಕೆ ಮಾಡಿ ಬಿಸಾಡುವ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂಬ ಕಾನೂನು ಇದೆ. ಆದರೆ, ಯಾವುದೇ ನಿಯಮ ಪಾಲಿಸುತ್ತಿಲ್ಲ. ಇದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಾಯಿಕೊಡೆಗಳಂತೆ ಗುಜುರಿ ಅಂಗಡಿಗಳು ತಲೆಎತ್ತಿವೆ. ಇಲ್ಲಿ ಯಾವುದೇ ರೀತಿ ನಿಯಮ ಪಾಲಿಸುತ್ತಿಲ್ಲ ಎಂಬ ಆರೋಪ ಇದೆ. ಅಲ್ಲದೇ ಕೈಗಾರಿಕಾ ಪ್ರದೇಶದಲ್ಲಿ ಕಳವು ಪ್ರಕರಣ ಹೆಚ್ಚುತ್ತಿದೆ.

ಗುಜರಿ ಮಾಲೀಕರು ನಿಯಮ ಪಾಲಿಸುತ್ತಿದ್ದಾರೆಯೇ ಎಂಬುದು ಪರಿಶೀಲಿಸಬೇಕಿದೆ. ನಿಯಮ ಮೀರುವವರ ವಿರುದ್ಧ ಕ್ರಮಕೈಗೊಳ್ಳಬೇಕಿದೆ.

ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಲಾಗುವುದು. ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿರುವುದು ಕಂಡು ಬಂದರೆ ಅಗತ್ಯ ಕ್ರಮಕೈಗೊಳ್ಳುವ ಕೆಲಸ ಮಾಡಲಾಗುವುದು ಎನ್ನುತ್ತಾರೆ ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.